ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಕೀರ್ತ 122
ಯಾತ್ರಿಕರು ಯೆರೂಸಲೇಮನ್ನು ಸ್ಮರಿಸುವುದು
ಯಾತ್ರಾಗೀತೆ; ದಾವೀದನ ಕೀರ್ತನೆ.
“ಯೆಹೋವನ ಮಂದಿರಕ್ಕೆ ಹೋಗೋಣ ಬಾ!”
ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
ಯೆರೂಸಲೇಮೇ! ನಮ್ಮ ಕಾಲುಗಳು,
ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.
ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ,
ಕಟ್ಟಲ್ಪಟ್ಟ ನಗರವಾಗಿದ್ದಿ.
ಕುಲಗಳು ಅಂದರೆ ಯೆಹೋವನ ಕುಲದವರು,
ಯೆಹೋವನ ನಾಮದ ಕೀರ್ತನೆಗೋಸ್ಕರ,
ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು.
ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ,
ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ.
“ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ;
ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”
ನನ್ನ ಬಂಧುಮಿತ್ರರ ನಿಮಿತ್ತವಾಗಿ,
“ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ.
ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ,
ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.