ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಕೀರ್ತ 123
ಬಾಧಿಸಲ್ಪಟ್ಟವನ ನಿರೀಕ್ಷೆ
ಯಾತ್ರಾಗೀತೆ.
ನೆಹೆ 4:1-6
ಪರಲೋಕದಲ್ಲಿ ಆಸೀನನಾಗಿರುವಾತನೇ,
ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
ಯಜಮಾನನ ಕೈಯನ್ನು ದಾಸನ ಕಣ್ಣುಗಳು,
ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ,
ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ,
ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು.
ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
ಲೋಕಭೋಗಿಗಳ ಹಾಸ್ಯದಿಂದಲೂ,
ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.