Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 124

ಯೆಹೋವನೊಬ್ಬನೇ ರಕ್ಷಕನು

ಯಾತ್ರಾಗೀತೆ; ದಾವೀದನದು.

ಕೀರ್ತ 129; ನೆಹೆ 4:7-23

“ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”,

ಎಂದು ಇಸ್ರಾಯೇಲರೇ ಹೇಳಲಿ.

ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ,

ಯೆಹೋವನು ನಮಗಿಲ್ಲದಿದ್ದರೆ,

“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು,

ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;

ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು;

ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;

ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.”

ಯೆಹೋವನಿಗೆ ಕೊಂಡಾಟವಾಗಲಿ;

ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.

ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ;

ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.

ಭೂಮಿ, ಆಕಾಶಗಳನ್ನು ಉಂಟುಮಾಡಿದ,

ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.