Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 125

ಯೆಹೋವನೇ ವಿಶ್ವಾಸಿಗಳ ಆಶ್ರಯ

ಯಾತ್ರಾಗೀತೆ.

ಯೆಹೋವನಲ್ಲಿ ಭರವಸೆ ಇಡುವವರು,

ಚೀಯೋನ್ ಪರ್ವತದ ಹಾಗೆ ಇದ್ದಾರೆ;

ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.

ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ,

ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.

ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ;

ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.

ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ,

ಆಗಿರುವವರಿಗೆ ಉಪಕಾರಮಾಡು.

ಯೆಹೋವನು ಡೊಂಕುದಾರಿ ಹಿಡಿದವರನ್ನು,

ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು.

ಇಸ್ರಾಯೇಲರಿಗೆ ಶುಭವುಂಟಾಗಲಿ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.