ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಕೀರ್ತ 126
ಚೀಯೋನಿನ ಸೌಭಾಗ್ಯದ ಪುನಃಸ್ಥಾಪನೆಗಾಗಿ ಪ್ರಾರ್ಥನೆ
ಯಾತ್ರಾಗೀತೆ.
ಕೀರ್ತ 85
ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ,
ನಾವು ಕನಸು ಕಂಡವರಂತೆ ಇದ್ದೆವು.
ಆಗ ನಮ್ಮ ಬಾಯಿ ಬಲು ನಗೆಯಿಂದಲೂ,
ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು.
ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು
ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ;
ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.
ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, 2
ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.
ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು,
ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
Source notes (2)
- Footnote ಅಥವಾ ಯೆಹೋವನು ನಮ್ಮನ್ನು ಸೆರೆಯಿಂದ ತಿರುಗಿ ಚೀಯೋನಿಗೆ ಬರಮಾಡಿದಾಗ ಆತನು ಚೀಯೋನನ್ನು ಪುನಃಸ್ಥಾಪಿಸಿದನು ಅಥವಾ ಅಭಿವೃದ್ಧಿಪಡಿಸು. ಚೀಯೋನ್ ಅಂದರೆ ಯೆರೂಸಲೇಮ್.
- Footnote ಅಥವಾ ನಮ್ಮನ್ನು ಪುನಃಸ್ಥಾಪಿಸು ಅಥವಾ ಅಭಿವೃದ್ಧಿಪಡಿಸು.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.