ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಕೀರ್ತ 127
ಯೆಹೋವನ ಕೃಪೆಯಿಂದಲೇ ಕೃತಾರ್ಥರಾಗುವೆವು
ಯಾತ್ರಾಗೀತೆ; ಸೊಲೊಮೋನನದು.
ನೆಹೆ 7:3-4
ಯೆಹೋವನು ಮನೆಯನ್ನು ಕಟ್ಟದಿದ್ದರೆ,
ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ;
ಯೆಹೋವನು ಪಟ್ಟಣವನ್ನು ಕಾಯದಿದ್ದರೆ,
ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.
ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ,
ಹೊತ್ತು ಮೀರಿ ಮಲಗುವವರೇ,
ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; 1
ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;
ಗರ್ಭಫಲವು ಆತನ ಬಹುಮಾನವೇ.
ಯೌವನದಲ್ಲಿ ಹುಟ್ಟಿದ ಮಕ್ಕಳು,
ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು.
ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ
ಅಂಥವರು ಅವಮಾನ ಹೊಂದುವುದಿಲ್ಲ.
Source notes (1)
- Footnote ಅಥವಾ ಆತನು ತನ್ನ ಪ್ರಿಯರಿಗೆ ನಿದ್ರೆಯನ್ನು ಅಥವಾ ಪ್ರತಿಫಲವನ್ನು ಕೊಡುತ್ತಾನೆ.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.