Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 130

ಪಾಪಪರಿಹಾರಕ್ಕಾಗಿ ಪ್ರಾರ್ಥನೆ

ಯಾತ್ರಾಗೀತೆ.

ನೆಹೆ 1:4-11

ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.

ಕರ್ತನೇ, ನನ್ನ ಮೊರೆಯನ್ನು ಕೇಳು;

ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.

ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ

ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?

ನೀನು ಪಾಪವನ್ನು ಕ್ಷಮಿಸುವವನಾದುದರಿಂದ,

ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.

ನಾನು ಯೆಹೋವನನ್ನು ಎದುರುನೋಡುತ್ತೇನೆ;

ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ;

ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.

ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ;

ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ,

ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.

ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು;

ಯೆಹೋವನು ಕೃಪಾಸಂಪನ್ನನು;

ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.

ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.