ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಕೀರ್ತ 131
ಭಕ್ತರ ದೀನಭಾವ
ಯಾತ್ರಾಗೀತೆ; ದಾವೀದನದು.
ಜ್ಞಾನೋ 23:26; ಮತ್ತಾ 18:3
ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ;
ನನಗೆ ಸೊಕ್ಕಿನ ಕಣ್ಣುಗಳಿಲ್ಲ;
ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ;
ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ,
ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ
ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.