Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 14

ದುಷ್ಟ ನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂಬ ಪ್ರಾರ್ಥನೆ

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು.

ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ;

ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ.

ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ,

ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,

ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.

ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.

ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ?

ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ;

ಯೆಹೋವನನ್ನು ಸ್ಮರಿಸುವುದಿಲ್ಲ.

ಅವರು ಫಕ್ಕನೆ ಭಯಭ್ರಾಂತರಾಗುವರು;

ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.

ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ

ಯೆಹೋವನು ಅವರ ಆಶ್ರಯವಲ್ಲವೇ.

ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ.

ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ,

ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು,

ಇಸ್ರಾಯೇಲರು ಹರ್ಷಿಸುವರು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.