Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 143

ಶಿಕ್ಷಾರಕ್ಷಣೆಗಳಿಗಾಗಿ ಪ್ರಾರ್ಥನೆ

ದಾವೀದನ ಕೀರ್ತನೆ.

ಕೀರ್ತ 140

ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು;

ನನ್ನ ಬಿನ್ನಹಕ್ಕೆ ಕಿವಿಗೊಡು;

ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.

ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ;

ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.

ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ;

ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ.

ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ;

ಬಹು ಕಾಲದಿಂದ ಸತ್ತವರಂತಿದ್ದೇನೆ.

ನನ್ನ ಆತ್ಮವು ಕುಂದಿಹೋಗಿದೆ;

ನನ್ನ ಮನಸ್ಸು ಬೆರಗಾಗಿದೆ.

ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ;

ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ;

ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;

ಕೈಚಾಚಿ ಬೇಡುತ್ತೇನೆ;

ಒಣನೆಲವು ನೀರಿಗಾಗಿ ಹೇಗೋ,

ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ

ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು;

ನನ್ನ ಆತ್ಮವು ಕುಂದಿಹೋಗಿದೆ.

ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.

ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ;

ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ.

ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು;

ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.

ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ;

ಶತ್ರುಗಳಿಂದ ನನ್ನನ್ನು ಬಿಡಿಸು.

ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು,

ನನ್ನ ದೇವರು ನೀನಲ್ಲವೋ?

ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.

ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು;

ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.

ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು.

ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು;

ನಾನು ನಿನ್ನ ಸೇವಕನಲ್ಲವೇ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.