Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 149

ಜಯಗೀತೆ

ಪ್ರಕ 19

ಯೆಹೋವನಿಗೆ ಸ್ತೋತ್ರ!

ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ;

ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.

ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ;

ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.

ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ;

ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.

ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು;

ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ;

ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.

ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ,

ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.

ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು;

ಅನ್ಯಜನಗಳನ್ನು ದಂಡಿಸುವರು;

ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು;

ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.

ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು;

ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು.

ಯೆಹೋವನಿಗೆ ಸ್ತೋತ್ರ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.