Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 20

ಅರಸನ ಜಯಕ್ಕಾಗಿ ಪ್ರಾರ್ಥಿಸುವುದು

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.

ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ;

ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.

ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ;

ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.

ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ;

ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ

ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ;

ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.

ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು;

ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು.

ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.

ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ

ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು.

ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು,

ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.

ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ;

ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.

ಅವರು ಬಿದ್ದುಹೋಗಿದ್ದಾರೆ;

ನಾವಾದರೋ ಎದ್ದು ನಿಂತಿದ್ದೇವೆ.

ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು;

ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.