Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 23

ಭಕ್ತರೆಂಬ ಕುರಿಗಳಿಗೆ ಒಳ್ಳೆಯ ಕುರುಬನಾದ ಯೆಹೋವನು

ದಾವೀದನ ಕೀರ್ತನೆ.

ಯೆಹೋವನು ನನಗೆ ಕುರುಬನು; ಕೊರತೆಪಡೆನು.

ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ;

ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.

ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ

ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.

ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,

ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;

ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.

ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; 1

ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ,

ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು.

ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

Source notes (1)
  1. Footnote ಲೂಕ 7:46.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.