Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 26

ಬಲಾತ್ಕಾರಿಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ

ದಾವೀದನ ಕೀರ್ತನೆ.

ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು.

ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ.

ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.

ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು;

ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.

ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ;

ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.

ನಾನು ಮೋಸಗಾರರ ಸಹವಾಸ ಮಾಡುವವನಲ್ಲ;

ಕಪಟಿಗಳನ್ನು ಸೇರುವವನಲ್ಲ.

ನನಗೆ ದುರ್ಜನರ ಕೂಟವು ಅಸಹ್ಯ;

ದುಷ್ಟರ ಸಂಗವು ಬೇಕಿಲ್ಲ.

ಯೆಹೋವನೇ, ನಾನು ನಿರ್ದೋಷಿ ಎಂದು,

ಕೈಗಳನ್ನು ತೊಳೆದುಕೊಂಡವನಾಗಿ,

ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ,

ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.

ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ;

ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.

ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ;

ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.

ಅವರ ಕೈಗಳು ಬಲಾತ್ಕಾರ ನಡೆಸುತ್ತವೆ;

ಅವರ ಬಲಗೈ ಲಂಚದಿಂದ ತುಂಬಿದೆ.

ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು;

ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.

ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ;

ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.