Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 28

ಭಕ್ತನ ಸ್ತುತಿ

ದಾವೀದನ ಕೀರ್ತನೆ.

ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ;

ಕೇಳದೆ ಇರಬೇಡ.

ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.

ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ

ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ;

ನನ್ನ ವಿಜ್ಞಾಪನೆಯನ್ನು ಲಾಲಿಸು.

ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ

ನನ್ನನ್ನೂ ಎಳೆದುಕೊಂಡು ಹೋಗಬೇಡ.

ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ,

ಒಳಗೆ ಕೇಡಾಗಲಿ ಎಂದು ಯೋಚಿಸುವವರು.

ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು;

ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.

ಅವರು ಯೆಹೋವನ ಕಾರ್ಯಗಳನ್ನೂ ಮತ್ತು

ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು;

ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.

ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ;

ಆತನಿಗೆ ಸ್ತೋತ್ರವಾಗಲಿ.

ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;

ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.

ಆದಕಾರಣ ನನ್ನ ಹೃದಯವು ಹರ್ಷಿಸುವುದು;

ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

ಯೆಹೋವನು ತನ್ನ ಜನರಿಗೆ ಬಲವೂ,

ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಯೆಹೋವನೇ, ನಿನ್ನ ಜನರನ್ನು ರಕ್ಷಿಸು;

ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು.

ನೀನು ಅವರ ಕುರುಬನಾಗಿರು;

ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.