Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 29

ಮೇಘಮಂಡಲದಲ್ಲಿ ಕಾಣಿಸುವ ಯೆಹೋವನ ಮಹಿಮೆ

ದಾವೀದನ ಕೀರ್ತನೆ.

ಯೆರೆ 10:13; ಯೆಶಾ 30:30

ದೇವದೂತರುಗಳಿರಾ, ಪರಮಪ್ರಭಾವವು,

ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.

ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ;

ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.

ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ;

ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ;

ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.

ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು,

ಎಷ್ಟೋ ಗಂಭೀರವಾದದ್ದು.

ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ;

ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.

ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು

ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.

ಯೆಹೋವನ ಗರ್ಜನೆಗೆ ಮಿಂಚುಗಳು

ಥಳಥಳನೆ ಹೊಳೆಯುತ್ತವೆ.

ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ;

ಕಾದೇಶ್ ಅರಣ್ಯವು ಕಂಪಿಸುತ್ತದೆ. 1

ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ;

ಕಾಡಿನ ಮರಗಳು ಬರಿದಾಗುತ್ತವೆ.

ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ.

ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು;

ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.

ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು;

ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.

Source notes (1)
  1. Footnote ಅಥವಾ ಯೆಹೋವನ ಗರ್ಜನೆಯು ಗರ್ಭದ ಜಿಂಕೆಗಳು ಈಯುತ್ತವೆ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.