Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 46

ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು

1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು.

ಕೀರ್ತ 76; 1ಪೂರ್ವ 15:20

ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ;

ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

ಆದುದರಿಂದ ಭೂಮಿಯು ಮಾರ್ಪಟ್ಟರೂ,

ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ,

ನಮಗೇನೂ ಭಯವಿಲ್ಲ.

ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು?

ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ

ಒಂದು ನದಿ ಇದೆ; ಅದರ ಕಾಲುವೆಗಳು,

ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ,

ದೇವರ ನಗರವನ್ನು ಸಂತೋಷಪಡಿಸುತ್ತವೆ.

ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ.

ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.

ಜನಾಂಗಗಳು ಕಳವಳಗೊಂಡವು;

ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.

ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ;

ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ

ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ;

ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.

ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ;

ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; 1

ರಥಗಳನ್ನು ದಹಿಸಿಬಿಟ್ಟಿದ್ದಾನೆ.

“2ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು;

ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.

ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ;

ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.

Source notes (2)
  1. Footnote ಅಥವಾ ಗುರಾಣಿಗಳನ್ನು. ಪ್ರಾಚೀನ ಗುರಾಣಿಗಳನ್ನು ಮರದಿಂದ ಮತ್ತು ಚರ್ಮದಿಂದ ತಯಾರಿಸಲಾಗುತ್ತಿತ್ತು ಮತ್ತು ಸಾಮಾನ್ಯವಾಗಿ ಆಲಿವ್ ಎಣ್ಣೆಯನ್ನು ಉಜ್ಜಲಾಗುತ್ತಿತ್ತು; ಇದರ ಪರಿಣಾಮವಾಗಿ ಅವುಗಳನ್ನು ಸುಲಭವಾಗಿ ದಹಿಸಬಹುದಾಗಿತ್ತು.
  2. Footnote ಅಥವಾ ಮೌನವಾಗಿರಿ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.