Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 47

ಸಾರ್ವಭೌಮನಾದ ಯೆಹೋವನು ಸಿಂಹಾಸನಾರೂಢನಾಗಿರುವುದು

ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.

ಕೀರ್ತ 93; 95-100

ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ;

ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.

ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ;

ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.

ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ,

ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.

ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ,

ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ

ದೇವರು ಜಯಘೋಷದಿಂದ ಏರಿದ್ದಾನೆ;

ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.

ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ;

ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.

ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು;

ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.

ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ;

ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.

ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ

ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ;

ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ.

ಆತನೇ ಸರ್ವೋನ್ನತನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.