Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 53

ದುಷ್ಟನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂದು ಪ್ರಾರ್ಥಿಸುವುದು

ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ.

ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ;

ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ;

ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು

ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,

ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ;

ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.

ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? 1

ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ;

ದೇವರನ್ನು ಪ್ರಾರ್ಥಿಸುವುದಿಲ್ಲ.

ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ,

ಅವರು ಪಕ್ಕನೆ ಭಯಭ್ರಾಂತರಾದರು; 2

ದುಷ್ಟರನ್ನು ದೇವರು ಸಂಹರಿಸಿ

ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. 3

ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.

ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ.

ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ,

ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು;

ಇಸ್ರಾಯೇಲರು ಹರ್ಷಿಸುವರು.

Source notes (3)
  1. Footnote ಅಥವಾ ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ;
  2. Footnote ಅಥವಾ ನಿಮಗೆ ಮುತ್ತಿಗೆಹಾಕಿದವರನ್ನು.
  3. Footnote ಅಥವಾ ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅವಮಾನಪಡಿಸಿದ್ದೀರಿ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.