Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 54

ವೈರಿಗಳಿಂದ ರಕ್ಷಿಸಬೇಕೆಂದು ಪ್ರಾರ್ಥಿಸುವುದು

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ.

ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು;

ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.

ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು;

ನನ್ನ ಮಾತುಗಳಿಗೆ ಕಿವಿಗೊಡು. 1

ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ;

ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ.

ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ

ಇಗೋ, ದೇವರೇ ನನಗೆ ಸಹಾಯಕನು; 2

ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.

ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ.

ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.

ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು;

ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.

ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ,

ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.

Source notes (2)
  1. Footnote ಅಥವಾ ಅನ್ಯರು.
  2. Footnote ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.