Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 6

ಕಷ್ಟಪೀಡಿತನಾದ ಭಕ್ತನ ಪ್ರಾರ್ಥನೆ

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ.

ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ;

ರೋಷದಿಂದ ನನ್ನನ್ನು ದಂಡಿಸಬೇಡ.

ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ.

ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.

ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ.

ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?

ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು;

ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.

ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ;

ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?

ನಾನು ನರಳಿ ನರಳಿ ದಣಿದಿದ್ದೇನೆ;

ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ.

ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.

ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು;

ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.

ಧರ್ಮವನ್ನು ಮೀರಿ ನಡೆಯುವವರೇ,

ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ;

ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.

ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ;

ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು;

ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.