Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 60

ಅಪಜಯ ಹೊಂದಿದವರು ಜಯಕ್ಕಾಗಿ ಪ್ರಾರ್ಥಿಸುವುದು

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು.

ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ;

ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ;

ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.

ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ;

ಅದು ನಡುಗುತ್ತಿರುವುದಲ್ಲಾ.

ಅದರ ಒಡಕುಗಳನ್ನು ಸರಿಮಾಡು;

ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ;

ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.

ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು,

ಆದ್ದರಿಂದ ಅವರು ಬಿಲ್ಲಿನಿಂದ1 ತಪ್ಪಿಸಿಕೊಳ್ಳಬಹುದು. ಸೆಲಾ

ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು.

ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.

ದೇವರು ತನ್ನ ಪವಿತ್ರಸ್ಥಳದಲ್ಲಿ2 ನುಡಿದಿದ್ದಾನೆ.

ಜಯಘೋಷಮಾಡುವೆನು;

ಶೆಖೆಮ್ ಪ್ರದೇಶವನ್ನು ಹಂಚುವೆನು.

ಸುಖೋತ್ ಬಯಲನ್ನು ಅಳೆದುಕೊಡುವೆನು.

ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು;

ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ.

ನನ್ನ ರಾಜದಂಡವು ಯೆಹೂದ ಕುಲವೇ.

ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು;

ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. 3

ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.

ಕೋಟೆಕೊತ್ತಲುಗಳುಳ್ಳ ನಗರಕ್ಕೆ

ನನ್ನನ್ನು ಕರೆದುಕೊಂಡು ಹೋಗುವವರು ಯಾರು?

ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?

ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ!

ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?

ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು;

ಮನುಷ್ಯರ ಸಹಾಯವು ವ್ಯರ್ಥ.

ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು;

ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

Source notes (3)
  1. Footnote ಬಿಲ್ಲಿನಿಂದ ಅಥವಾ ಸತ್ಯದ ನಿಮಿತ್ತ ಅವರು ತಪ್ಪಿಸಿಕೊಳ್ಳುತ್ತಾರೆ.
  2. Footnote ಪವಿತ್ರಸ್ಥಳದಲ್ಲಿ ಅಥವಾ ಪವಿತ್ರತ್ವವನ್ನು ಸಾಕ್ಷಿಯಾಗಿ.
  3. Footnote ಓ ಫಿಲಿಷ್ಟಿಯ ದೇಶವೇ ನೀನು ನನ್ನ ವಿಷಯವಾಗಿ ಜಯಘೋಷ ಮಾಡುವಿ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.