Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 63

ಭಕ್ತನು ದೇವದರ್ಶನವನ್ನು ಹಂಬಲಿಸಿ ಸಂತೃಪ್ತಿಹೊಂದಿದ್ದು

ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ.

ದೇವರೇ, ನೀನೇ ನನ್ನ ದೇವರು;

ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ.

ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ;

ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ,

ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.

ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ,

ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.

ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ;

ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.

ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ,

ನಿನ್ನ ಹೆಸರೆತ್ತಿ ಕೈಮುಗಿಯುವೆನು.

ಮೃಷ್ಟಭೋಜನದಿಂದಲೋ ಎಂಬಂತೆ,

ನನ್ನ ಮನಸ್ಸು ಸಂತುಷ್ಟವಾಗಿರುವುದು;

ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.

ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ,

ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.

ನೀನು ನನಗೆ ಸಹಾಯಕನಾಗಿರುವೆಯಲ್ಲಾ;

ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು,

ಆನಂದಘೋಷ ಮಾಡುತ್ತಿರುವೆನು.

ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು;

ನಿನ್ನ ಬಲಗೈ ನನಗೆ ಆಧಾರವಾಗಿರುವುದು.

ನನ್ನ ಜೀವಕ್ಕೆ ಕೇಡು ಬಗೆಯುವವರೋ,

ಅಧೋಲೋಕಕ್ಕೆ ಇಳಿದುಹೋಗುವರು.

ಅವರು ಕತ್ತಿಗೆ ಬಲಿಯಾಗುವರು;

ನರಿಗಳ ಪಾಲಾಗುವರು.

ಆದರೆ ಅರಸನೋ ದೇವರಲ್ಲಿ ಆನಂದಿಸುವನು,

ದೇವರ ಮೇಲೆ ಆಣೆಯಿಡುವವರೆಲ್ಲರು

ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.