ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಕೀರ್ತ 67
ದೇವಸ್ತುತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು.
ಕೀರ್ತ 98
ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ;
ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ
ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ,
ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ;
ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ,
ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ
ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ
ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ;
ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ.
ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ.
ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.