Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 70

ಸಂರಕ್ಷಣೆಗಾಗಿ ಪ್ರಾರ್ಥನೆ

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.

ಕೀರ್ತ 40:13-17

ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು.

ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.

ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ;

ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.

ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು

ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.

ನಿನ್ನ ದರ್ಶನವನ್ನು ಕೋರುವವರೆಲ್ಲರು

ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;

ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.

ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;

ದೇವರೇ, ಬೇಗನೆ ಬಾ.

ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.