Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 75

ನ್ಯಾಯಾಧೀಶನಾದ ದೇವರಿಗೆ ಸ್ತುತಿ

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು.

ಕೀರ್ತ 57

ದೇವರೇ, ಕೊಂಡಾಡುತ್ತೇವೆ;

ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು;

ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.

ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ,

ನಾನೇ ನೀತಿಯಿಂದ ತೀರ್ಪುಕೊಡುವೆನು.

ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ,

ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. ಸೆಲಾ

ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು;

ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;

ಕೊಂಬುಗಳನ್ನು ಮೇಲೆತ್ತಬೇಡಿರಿ;

ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.

ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ,

ಅರಣ್ಯದಿಂದಾಗಲಿ ಬರುವುದಿಲ್ಲ.

ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು,

ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.

ಯೆಹೋವನ ಕೈಯಲ್ಲಿ ಪಾತ್ರೆ ಇದೆ;

ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ.

ಅದರಿಂದ ಹೊಯ್ದು ಹಂಚುತ್ತಾನೆ.

ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.

ನಾನಾದರೋ ಸದಾ ವರ್ಣಿಸುವವನಾಗಿ,

ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.

ದುಷ್ಟರ ಕೊಂಬುಗಳನ್ನೆಲ್ಲಾ1 ಮುರಿದುಬಿಡುವೆನು;

ಆದರೆ ನೀತಿವಂತರ ಕೊಂಬುಗಳನ್ನು 2ಉನ್ನತಮಟ್ಟಕ್ಕೆ ಎತ್ತಲ್ಪಡುವವು.

Source notes (2)
  1. Footnote ಕೊಂಬುಗಳನ್ನೆಲ್ಲಾ ಅಥವಾ ಬಲವನ್ನು.
  2. Footnote ಕೊಂಬುಗಳನ್ನು ಅಥವಾ ಬಲವನ್ನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.