Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 8

ದೇವರು ಅನುಗ್ರಹಿಸಿರುವ ಗೌರವಕ್ಕಾಗಿ ಆತನನ್ನು ಕೊಂಡಾಡುವುದು

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು.

ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.

ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.

ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ

ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ,

ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ

ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.

ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ,

ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,

ಮನುಷ್ಯನು ಎಷ್ಟು ಮಾತ್ರದವನು,

ಅವನನ್ನು ನೀನು ಏಕೆ ಸ್ಮರಿಸಬೇಕು?

ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?

ಅವನನ್ನು ದೇವರಿಗಿಂತ1 ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ;

ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.

ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ 2

ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.

ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,

ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು,

ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು,

ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.

ನಮ್ಮ ಕರ್ತನಾದ ಯೆಹೋವನೇ,

ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.

Source notes (2)
  1. Footnote ದೇವರಿಗಿಂತ ಅಥವಾ ದೇವದೂತರಿಗಿಂತ.
  2. Footnote ಇಬ್ರಿಯ 2:6-9 ಅನ್ನು ನೋಡಿರಿ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.