Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 87

ಚೀಯೋನೇ ಎಲ್ಲಾ ದೇವಜನರ ಮಾತೃಭೂಮಿ

ಕೋರಹೀಯರ ಕೀರ್ತನೆ; ಗೀತೆ.

ಯೆಶಾ 2:2-4; 19:19-24

ಯೆಹೋವನು ಸ್ಥಾಪಿಸಿದ ಪಟ್ಟಣವು

ಪರಿಶುದ್ಧ ಪರ್ವತದ ಮೇಲಿದೆ.

ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ,

ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.

ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,

“ರಹಬ1, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು.

ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.

ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು;

ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.

ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ,

“ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ

ಇವರು ಹಾಡುತ್ತಾ, ಕುಣಿಯುತ್ತಾ,

“ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.

Source notes (1)
  1. Footnote ರಹಬ ಅಥವಾ ಐಗುಪ್ತ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.