Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 91

ದೇವಾಶ್ರಿತನು ಸುರಕ್ಷಿತನು

ವಿಮೋ 23:20-26

ಅತ್ಯುನ್ನತನಾದ ದೇವರ ಮೊರೆಹೊಕ್ಕವನು,

ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು,

ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು.

ನನ್ನನ್ನು ಬೇಟೆಗಾರನ ಬಲೆಯಿಂದಲೂ,

ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.

ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು;

ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ.

ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.

ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ,

ಹಗಲಲ್ಲಿ ಹಾರಿಬರುವ ಬಾಣಕ್ಕೂ,

ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ,

ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.

ನಿನ್ನ ಮಗ್ಗುಲಲ್ಲಿ ಸಾವಿರ ಜನರು,

ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.

ನೀನು ಅದನ್ನು ಕಣ್ಣಾರೆ ಕಂಡು,

ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.

ಯೆಹೋವನೇ ನನ್ನ ಶರಣನು!

ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.

ಯಾವ ಕೇಡೂ ನಿನಗೆ ಸಂಭವಿಸದು;

ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.

ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ

ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.

ನಿನ್ನ ಕಾಲು ಕಲ್ಲಿಗೆ ತಗಲದಂತೆ,

ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.

ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ;

ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.

ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು;

ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.

ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು;

ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;

ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು;

ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.