ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಕೀರ್ತ 93
ಯೆಹೋವನೇ ನಿತ್ಯಕ್ಕೂ ರಾಜಾಧಿರಾಜನು
ವಿಮೋ 15; ಯೆಶಾ 52:7; ಕೀರ್ತ 96; 97; 99
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ,
ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ;
ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.
ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ;
ಯುಗಯುಗಾಂತರದಿಂದಲೂ ನೀನು ಇರುವಿ.
ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು;
ನದಿಗಳು ಘೋಷಿಸುತ್ತವೆ.
ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ,
ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.
ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ;
ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.