ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಕೀರ್ತ 95
ದೇವರನ್ನು ವಿಶ್ವಾಸದಿಂದ ಆರಾಧಿಸುವುದು
ಕೀರ್ತ 81; 96-100
ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ;
ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ;
ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
ಯೆಹೋವನು ಮಹಾದೇವರೂ,
ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ;
ಪರ್ವತಶಿಖರಗಳು ಆತನವೇ.
ಆತನೇ ಸಮುದ್ರವನ್ನು ನಿರ್ಮಿಸಿದವನು;
ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ
ಸಾಷ್ಟಾಂಗವೆರಗಿ ಆರಾಧಿಸೋಣ.
ಆತನು ನಮ್ಮ ದೇವರು;
ನಾವೋ ಆತನು ಪಾಲಿಸುವ ಪ್ರಜೆಯೂ,
ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ.
ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ1,
ಮಸ್ಸಾದಲ್ಲಿ2 ಮಾಡಿದ ದಿನದಂತೆ,
ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು;
ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು;
“ಈ ಜನರು ಹೃದಯದಲ್ಲಿ ತಪ್ಪಿಹೋಗುವವರು,
ನನ್ನ ಆಜ್ಞೆಗಳಿಗೆ ವಿಧೇಯರಾಗದವರು3” ಎಂದು ಹೇಳಿದೆನು.
ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು
ಕೋಪಗೊಂಡು ಪ್ರಮಾಣಮಾಡಿದೆನು.
Source notes (3)
- Footnote ಮೆರೀಬ ಅಂದರೆ ವಾಗ್ವಾದ.
- Footnote ಮಸ್ಸಾದಲ್ಲಿ ಅಂದರೆ ಪರೀಕ್ಷೆ, ವಿಮೋ 17:1-17, ಅರಣ್ಯ 20:1-13, ಧರ್ಮೋ 6:16, 33:8.
- Footnote ನನ್ನ ಆಜ್ಞೆಗಳಿಗೆ ವಿಧೇಯರಾಗದವರು ಅಥವಾ ನನ್ನ ಮಾರ್ಗವನ್ನು ತಿಳಿಯದವರು.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.