Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 97

ಸಾರ್ವಭೌಮನಾದ ಯೆಹೋವನನ್ನು ಸ್ತುತಿಸುವುದು

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;

ಭೂಲೋಕವು ಸಂತೋಷಿಸಲಿ;

ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.

ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ;

ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ1.

ಬೆಂಕಿಯು ಆತನ ಮುಂದೆ ಹೋಗಿ,

ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.

ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು;

ಭೂಮಿಯು ಅದನ್ನು ಕಂಡು ನಡುಗಿತು.

ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ

ಪರ್ವತಗಳು ಮೇಣದಂತೆ ಕರಗಿಹೋದವು.

ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು;

ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.

ವಿಗ್ರಹಗಳಲ್ಲಿ ಹಿಗ್ಗುವವರೂ,

ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; 2

ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.

ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ

ಚೀಯೋನ್ ಪಟ್ಟಣವು ಹರ್ಷಿಸಿತು;

ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.

ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ;

ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ. 3

ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ.

ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ,

ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.

ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು4,

ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.

ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ;

ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.5

Source notes (5)
  1. Footnote ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ ಮೂಲತಃ ನೀತಿ ಮತ್ತು ನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.
  2. Footnote ಅಥವಾ ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳುತ್ತಾರೆ.
  3. Footnote ಅಥವಾ ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ.
  4. Footnote ಪ್ರಕಾಶಿಸುವುದು ಅಥವಾ ಬಿತ್ತಲ್ಪಟ್ಟಿದೆ.
  5. Footnote ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. ಅಥವಾ ಆತನ ಪರಿಶುದ್ಧ ಸ್ಮರಣೆಗಾಗಿ ಕೊಂಡಾಡಿರಿ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.