Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 98

ಯೆಹೋವರಾಜನ ರಕ್ಷಣೆಯನ್ನು ಕೊಂಡಾಡುವುದು

ಕೀರ್ತ 67

ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ;

ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ.

ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ;

ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.

ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ,

ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ.

ಭೂಲೋಕದ ಎಲ್ಲಾ ಕಡೆಯವರೂ,

ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.

ಸಮಸ್ತ ಭೂನಿವಾಸಿಗಳೇ,

ಯೆಹೋವನಿಗೆ ಜಯಘೋಷಮಾಡಿರಿ;

ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.

ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ;

ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.

ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ,

ಯೆಹೋವರಾಜನಿಗೆ ಜಯಘೋಷಮಾಡಿರಿ.

ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ,

ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.

ನದಿಗಳು ಚಪ್ಪಾಳೆ ಹೊಡೆಯಲಿ;

ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.

ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ;

ಆತನು ಲೋಕಕ್ಕೆ ನೀತಿಗನುಸಾರವಾಗಿಯೂ,

ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.