Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 99

ಯೆಹೋವರಾಜನ ಪವಿತ್ರತೆಯನ್ನು ಕೊಂಡಾಡುವುದು

ಯೆಶಾ 6

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;

ಜನಾಂಗಗಳು ನಡುಗಲಿ.

ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ;

ಭೂಮಿಯು ಕಂಪಿಸಲಿ.

ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು;

ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.

ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ;

ಆತನು ಪರಿಶುದ್ಧನು.

ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ1;

ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ,

ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.

ನಮ್ಮ ಯೆಹೋವ ದೇವರನ್ನು ಘನಪಡಿಸಿರಿ;

ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ.

ಆತನು ಪರಿಶುದ್ಧನು.

ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ,

ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ,

ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.

ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು;

ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.

ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ.

ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ,

ಕ್ಷಮಿಸುವ ದೇವರಾಗಿದ್ದಿ.

ನಮ್ಮ ಯೆಹೋವ ದೇವರನ್ನು ಘನಪಡಿಸಿರಿ;

ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ.

ನಮ್ಮ ಯೆಹೋವ ದೇವರು ಪರಿಶುದ್ಧನು.

Source notes (1)
  1. Footnote ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.