ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಪ್ರಕ 10
ಬಲಿಷ್ಠನಾದ ದೂತನು ಮತ್ತು ಚಿಕ್ಕ ಸುರುಳಿಯು
ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. 1ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. 2ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. 3ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು. 4ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು, 5ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ 6ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.
ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು 7ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ, 8ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, 9ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ 10ಆಣೆಯಿಟ್ಟು, 11“ಇನ್ನು ತಡಮಾಡದೆ, 12ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು 13ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.
ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು.
ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, 14ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು. ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು. ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.
Source notes (14)
- Footnote ಯೆಹೆ. 1:28:
- Footnote ಪ್ರಕ 1:16; ಮತ್ತಾ 17:2:
- Footnote ಪ್ರಕ 1:15:
- Footnote ಪ್ರಕ 10:8-10:
- Footnote ಯೋವೇ. 3:16; ಆಮೋ. 1:2:
- Footnote ಮೂಲ: ಅವುಗಳಿಗೆ ಮುದ್ರೆಹಾಕು; ದಾನಿ. 8:26; 12:4, 9; ಪ್ರಕ 22:10:
- Footnote ಆದಿ 14:22:
- Footnote ಪ್ರಕ 4:11:
- Footnote ಪ್ರಕ 4:9:
- Footnote ದಾನಿ. 12:7:
- Footnote ಪ್ರಕ 12:12; 16:17; 21:6; ದಾನಿ. 12:7:
- Footnote ಪ್ರಕ 11:15:
- Footnote ಆಮೋ. 3:7:
- Footnote ಯೆಹೆ. 2:4, 3:3; ಯೆರೆ 15:16:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.