ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಪ್ರಕ 12
ಘಟಸರ್ಪ ಮತ್ತು ಸ್ತ್ರೀ
ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು 1ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು. 2ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ 3ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ 4ಏಳು ತಲೆಗಳೂ 5ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ 6ಏಳು ಕಿರೀಟಗಳು ಇದ್ದವು. ಅದು ತನ್ನ ಬಾಲದಿಂದ 7ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು 8ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ 9ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು. ಆಕೆ 10ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು. ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ 11ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.
ಪರಲೋಕದಲ್ಲಿ ಯುದ್ಧ ನಡೆಯಿತು. 12ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ 13ಅವನ ದೂತರೂ ಯುದ್ಧ ಮಾಡಿ ಕಾದಾಡಿದರು. ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು. 14ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ 15ಪುರಾತನ ಸರ್ಪವನ್ನು 16ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ 17ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ 18ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ. ಅವರು 19ಮರಣದವರೆಗೆ ತಮ್ಮ 20ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ 21ಅವನನ್ನು ಜಯಿಸಿದರು. ಆದ್ದರಿಂದ 22ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ 23ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು 24ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.
ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, 25ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು. ಆದರೆ ಆ ಸ್ತ್ರೀಯು 26ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ 27ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು. ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು. ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು. ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, 28ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, 29ದೇವರ ಆಜ್ಞೆಗಳನ್ನು ಕೈಗೊಂಡು ನಡೆದು 30ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ 31ಯುದ್ಧಮಾಡುವುದಕ್ಕೆ ಹೊರಟು, ಸಮುದ್ರ ತೀರದ ಮರಳಿನ ಮೇಲೆ ನಿಂತನು.
Source notes (31)
- Footnote ಕೀರ್ತ 104:2; ಪರಮ. 6:10:
- Footnote ಯೆಶಾ 66:7-10; ಮೀಕ. 4:10; ಮತ್ತಾ 24:8; ಯೋಹಾ 16:21:
- Footnote ಯೆಶಾ 27:1; ಪ್ರಕ 17:3:
- Footnote ಪ್ರಕ 13:1; 17:9, 12:
- Footnote ದಾನಿ. 7:7:
- Footnote ಪ್ರಕ 19:12:
- Footnote ಪ್ರಕ 8:7:
- Footnote ದಾನಿ. 8:10:
- Footnote ಮತ್ತಾ 2:16:
- Footnote ಮತ್ತಾ 2:6; ಪ್ರಕ 2:27:
- Footnote ಪ್ರಕ 11:2, 3; 13:5:
- Footnote ಯೂದ. 9:
- Footnote ಮತ್ತಾ 25:41; 2 ಪೇತ್ರ. 2:4; ಯೂದ 6:
- Footnote ಪ್ರಕ 20:3, 10; 13:14; ಯೋಹಾ 8:44:
- Footnote ಆದಿ 3:1; ಪ್ರಕ 20:2:
- Footnote ಲೂಕ 10:18; ಯೊಹಾ. 12:31:
- Footnote ಅಥವಾ ಜಯವೂ. ಪ್ರಕ 7:10; 19:1:
- Footnote ಯೋಬ. 1:9; 2:5; ಜೆಕ. 3:1:
- Footnote ಪ್ರಕ 2:10:
- Footnote ಲೂಕ 14:26; ಯೋಹಾ 12:25:
- Footnote ಪ್ರಕ 15:2; ಯೋಹಾ 16:33; ರೋಮಾ. 8:37; 16:20:
- Footnote ಕೀರ್ತ 96:11; ಯೆಶಾ 44:23; 49:13; ಪ್ರಕ 18:20:
- Footnote ಪ್ರಕ 8:13:
- Footnote ಮತ್ತಾ 8:29; ಪ್ರಕ 10:6:
- Footnote ವ. 5:
- Footnote ವ. 6:
- Footnote ವಿಮೋ 19:4:
- Footnote ಆದಿ 3:15:
- Footnote ಪ್ರಕ 14:12; 1 ಯೋಹಾ 2:3:
- Footnote ಪ್ರಕ 1:2; 6:9; 19:10:
- Footnote ಪ್ರಕ 11:7; 13:7:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.