ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಪ್ರಕ 13
ಎರಡು ಮೃಗಗಳು
ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. 2ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ 3ದೇವದೂಷಣೆಯ ನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. 4ಅದಕ್ಕೆ ಘಟಸರ್ಪನು ಶಕ್ತಿಯನ್ನೂ, 5ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು. ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, 6ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು. ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, 7“ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು. 8
ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು 9ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು. ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು. 10ಇದಲ್ಲದೆ ದೇವಜನರ ಮೇಲೆ 11ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. 12ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ 13ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ 14ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು. 15
ಕಿವಿಯುಳ್ಳವನು ಕೇಳಲಿ, 16ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, 17ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. 18ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ. 19
ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ 20ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು. ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ 21ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು. ಇದು ಜನರ ಮುಂದೆ 22ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ, ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು 23ಮರಳುಗೊಳಿಸಿತ್ತು. ಅವರಿಗೆ, 24ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು. ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, 25ತನ್ನನ್ನು ಆರಾಧಿಸದವರೆಲ್ಲರಿಗೂ 26ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು. ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ 27ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು. ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ 28ಮೊದಲನೆಯ ಮೃಗದ ಹೆಸರು ಅಥವಾ 29ಅದರ ಹೆಸರನ್ನು ಸೂಚಿಸುವ ಸಂಖ್ಯೆ. 30
ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.
Source notes (30)
- Footnote ದಾನಿ. 7:2-8:
- Footnote ಪ್ರಕ 12:3:
- Footnote ಪ್ರಕ 17:3:
- Footnote ಪ್ರಕ 13:4, 11; ಲೂಕ 4:6:
- Footnote ಪ್ರಕ 16:10:
- Footnote ಪ್ರಕ 17:8:
- Footnote ಪ್ರಕ 18:18:
- Footnote ದಾನಿ. 7:8, 11, 20; 11:36; 2 ಥೆಸ. 2:4:
- Footnote ಪ್ರಕ 11:2; 12:6:
- Footnote ಕೆಲವು ಪ್ರತಿಗಳಲ್ಲಿ ಈ ವಾಕ್ಯವು ಇಲ್ಲ.
- Footnote ದಾನಿ. 7:21; ಪ್ರಕ 11:7; 12:17:
- Footnote ಅ. ಕೃ. 2:23; 1 ಪೇತ್ರ. 1:19, 20:
- Footnote ಪ್ರಕ 3:5:
- Footnote ಪ್ರಕ 3:10:
- Footnote ಪ್ರಕ 2:7:
- Footnote ಯೆಶಾ 33:1; ಯೆರೆ 15:2; 43:11:
- Footnote ಆದಿ 9:6; ಮತ್ತಾ 26:52:
- Footnote ಪ್ರಕ 14:12:
- Footnote ಅಂದರೆ, ಸುಳ್ಳುಪ್ರವಾದಿ; ಪ್ರಕ 13:1, 14; 16:13; 19:20:
- Footnote ಮೂಲ. ಕುರಿಮರಿಗಿರುವಂತೆ.
- Footnote ವ. 9:
- Footnote ಪ್ರಕ 20:9; 1 ಅರಸು. 18:38; 2 ಅರಸು. 1:10, 12; ಲೂಕ 9:54:
- Footnote ಪ್ರಕ 12:9:
- Footnote ಪ್ರಕ 13:3, 12:
- Footnote ಪ್ರಕ 14:9, 11; 16:2; 19:20; 20:4:
- Footnote ಪ್ರಕ 16:6:
- Footnote ಪ್ರಕ 7:3; ಗಲಾ. 6:17:
- Footnote ಪ್ರಕ 14:11:
- Footnote ಪ್ರಕ 15:2:
- Footnote ಪ್ರಕ 17, 9:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.