ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಪ್ರಕ 14
ಕುರಿಮರಿಯು ಮತ್ತು ಆತನ ಜನರು
ಆನಂತರ ನಾನು ನೋಡಲಾಗಿ 1ಯಜ್ಞದ ಕುರಿಮರಿಯಾದಾತನು 2ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ 3ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. 4ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು. ಇದಲ್ಲದೆ ಪರಲೋಕದಿಂದ 5ಜಲಪ್ರವಾಹದ ಘೋಷದಂತೆಯೂ 6ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು 7ವೀಣೆಗಳನ್ನು8 ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು. ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ 9ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು 10ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. ಇವರು 11ಕನ್ಯೆಯರಂತೆ 12ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ 13ಪ್ರಥಮಫಲದಂತಾದರು. ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು 14ನಿರ್ದೋಷಿಗಳಾಗಿದ್ದಾರೆ.
ಮೂವರು ದೇವದೂತರ ಸಂದೇಶಗಳು
ಮತ್ತೊಬ್ಬ ದೇವದೂತನು 15ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, 16ನೀರಿನ ಬುಗ್ಗೆಗಳನ್ನೂ 17ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.
ಅವನ ಹಿಂದೆ ಎರಡನೆಯ ದೇವದೂತನು ಬಂದು, 18“ಬಿದ್ದಳು! ಬಿದ್ದಳು! 19ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ 20ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು 21ಕುಡಿಸಿದಳು” ಎಂದು ಹೇಳಿದನು.
ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ 22ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ 23ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ, ಅವನೂ ಸಹ 24ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ 25ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ 26ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. 27ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, 28ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ 29ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು. 30ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ 31ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.
ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ 32ಕರ್ತನ ಭಕ್ತರಾಗಿ ಸಾಯುವವರು 33ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. 34ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.
ಭೂಲೋಕದ ಸುಗ್ಗಿಕಾಲವನ್ನು ಕುರಿತದ್ದು
ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ 35ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. 36ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು. ಆಗ ಮತ್ತೊಬ್ಬ ದೂತನು 37ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, 38“ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. 39ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು. ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.
ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು. ತರುವಾಯ 40ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. 41ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು. ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, 42ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು. ಆಗ ಆಲೆಯನ್ನು 43ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು 44ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.
Source notes (44)
- Footnote ಪ್ರಕ 5:6:
- Footnote ಕೀರ್ತ 2:6; ಇಬ್ರಿ. 12:22:
- Footnote ಪ್ರಕ 7:4:
- Footnote ಪ್ರಕ 7:3:
- Footnote ಪ್ರಕ 1:15:
- Footnote ಪ್ರಕ 6:1; 19:6:
- Footnote ಪ್ರಕ 5:8; 15:2:
- Footnote ತ್ರಿಕೋನಾಕಾರದ ಒಂದು ಬಗೆಯ ತಂತಿ ವಾದ್ಯ
- Footnote ಪ್ರಕ 5:9:
- Footnote ಪ್ರಕ 2:17; 19:12:
- Footnote ತಮ್ಮ ಶೀಲವನ್ನು ಶುದ್ಧವಾಗಿ ಇಟ್ಟುಕೊಂಡವರು ಅಥವಾ ಶೀಲವನ್ನುಳಿಸಿಕೊಂಡವರು.
- Footnote 2 ಕೊರಿ 11:2:
- Footnote ಅರಣ್ಯ 18:12; ಯಾಕೋಬ 1:18:
- Footnote ಯೂದ. 24:
- Footnote ಪ್ರಕ 8:13:
- Footnote ಪ್ರಕ 8:10; 16:4:
- Footnote ನೆಹೆ 9:6; ಪ್ರಕ 4:11:
- Footnote ಯೆಶಾ 21:9; ಯೆರೆ 51:8; ಪ್ರಕ 18:2:
- Footnote ದಾನಿ. 4:30; ಪ್ರಕ 16:19; 17:5; 18:10:
- Footnote ಅಥವಾ. ಜಾರತ್ವದಿಂದಾಗುವ ದೇವರ ರೌದ್ರವೆಂಬ. ಪ್ರಕ 18:3:
- Footnote ಯೆರೆ 51:7:
- Footnote ಪ್ರಕ 13:15:
- Footnote ಪ್ರಕ 13:16:
- Footnote ಪ್ರಕ 18:6:
- Footnote ಪ್ರಕ 16:19; ಯೋಬ. 21:20
- Footnote ಪ್ರಕ 20:10:
- Footnote ಯೆಶಾ 34:10; ಆದಿ 19:28; 18:18; 19:3:
- Footnote ಪ್ರಕ 13:15:
- Footnote ಪ್ರಕ 4:8:
- Footnote ಪ್ರಕ 12:17:
- Footnote ಪ್ರಕ 13:10:
- Footnote 1 ಕೊರಿ 15:18; 1 ಥೆಸ. 4:16:
- Footnote ಪ್ರಕ 20:6; ಪ್ರಸಂಗಿ 4:2:
- Footnote ಪ್ರಕ 6:11:
- Footnote ದಾನಿ. 7:13; ಪ್ರಕ 1:13
- Footnote ಪ್ರಕ 6:2:
- Footnote ಪ್ರಕ 15:6:
- Footnote ಯೆರೆ 51:33:
- Footnote ವ. 18; ಯೋವೇ. 3:13; ಮಾರ್ಕ 4:29; ಮತ್ತಾ 13:39:
- Footnote ಪ್ರಕ 16:8:
- Footnote ಯೋವೇ. 3:13:
- Footnote ಯೆಶಾ 63:2, 3; ಪ್ರಲಾ 1:15; ಪ್ರಕ 19:15:
- Footnote ಇಬ್ರಿ. 13:12:
- Footnote ಮೂಲ: ಸಾವಿರದ ಆರುನೂರು ಸ್ತಾದ್ಯ.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.