Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಪ್ರಕ 18

ಬಾಬೆಲಿನ ಪತನವು

ಇದಾದ ನಂತರ ಮಹಾ ಅಧಿಕಾರವುಳ್ಳ 1ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. 2ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು. ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, 3ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು 4ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, 5ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು. ಎಲ್ಲಾ ದೇಶಗಳವರೂ 6ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. 7ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ 8ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.

ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು,

“ನನ್ನ ಜನರೇ, 9ಅವಳನ್ನು ಬಿಟ್ಟು ಬನ್ನಿರಿ,

ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು.

ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು. 10

ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. 11

ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ. 12

ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ.

ಅವಳ ಕೃತ್ಯಗಳಿಗೆ ಪ್ರತಿಯಾಗಿ 13ಅವಳಿಗೆ ಎರಡರಷ್ಟು ಕೊಡಿರಿ.

ಅವಳು ಕಲಸಿಕೊಟ್ಟ 14ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ. 15

ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ

ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ,

ಏಕೆಂದರೆ ಅವಳು ತನ್ನ ಹೃದಯದಲ್ಲಿ, 16

‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ,

ನಾನು ವಿಧವೆಯಲ್ಲ,

ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.

ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು 17

ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು.

ಅವಳಿಗೆ ತೀರ್ಪುಕೊಡುವ 18ಕರ್ತನಾದ ದೇವರು ಶಕ್ತನಾಗಿರುವುದರಿಂದ 19

ಅವಳು ಬೆಂಕಿಯಿಂದ ನಾಶವಾಗುವಳು.

“20ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ 21ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ 22ದೂರದಲ್ಲಿ ನಿಂತು ಅಳುತ್ತಾ 23ಗೋಳಾಡುತ್ತಾ, ‘ಅಯ್ಯೋ ಅಯ್ಯೋ 24ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು 25ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.

“ಇದಲ್ಲದೆ 26ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ, ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು. ‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’ 27ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು 28ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು 29ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’ ಅಷ್ಟು ಐಶ್ವರ್ಯವು 30ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ 31ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು, 32ಅವಳ ದಹನದ ಹೊಗೆಯನ್ನು ನೋಡಿ 33‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು. ಅನಂತರ ಅವರು 34ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ 35ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, 36ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು. 37ಪರಲೋಕವೇ, ದೇವಜನರೇ, ಅಪೊಸ್ತಲರೇ, 38ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ 39ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.

ಆಗ 40ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ 41ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, 42“ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ. ಬಾಬೆಲೇ ನಿನ್ನಲ್ಲಿ 43ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. 44ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. 45ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. 46ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. 47ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.

“48ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ 49ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.

Source notes (49)
  1. Footnote ಪ್ರಕ 17 1, 7:
  2. Footnote ಯೆಹೆ. 43:2:
  3. Footnote ಯೆಶಾ 21:9; ಪ್ರಕ 14:8:
  4. Footnote ಯೆರೆ 50:39; 51:37; ಚೆಫ. 2:14,15:
  5. Footnote ಯೆಶಾ 14:23:
  6. Footnote ಪ್ರಕ 14:8:
  7. Footnote ಅಥವಾ, ಅವಳ ದುಷ್ಕರ್ಮವನ್ನು ನೋಡಿರಿ. ಪ್ರಕ 17:2:
  8. Footnote ಪ್ರಕ 18:11, 15:
  9. Footnote ಯೆಶಾ 48:20; ಯೆರೆ 51:6, 45; 2 ಕೊರಿ 6:17:
  10. Footnote ಎಜ್ರ. 9:6; ಯೋನ. 1:2:
  11. Footnote ಪ್ರಕ 16:19:
  12. Footnote ಕೀರ್ತ 48:20; ಯೆರೆ 51:6, 45; 2 ಕೊರಿ 6 17:
  13. Footnote ಯೆರೆ 16:18:
  14. Footnote ಪ್ರಕ 14:10; 16:19; 17:4:
  15. Footnote ಯೆಹೆ. 28:2-8:
  16. Footnote ಯೆಶಾ 47:7, 8; ಚೆಫ. 2:15:
  17. Footnote ಯೆಶಾ 47 9; ಪ್ರಕ 18:10:
  18. Footnote ಯೆರೆ 50. 34:
  19. Footnote ಪ್ರಕ 17:16:
  20. Footnote ಪ್ರಕ 17:2; 18:3:
  21. Footnote ಪ್ರಕ 18:18; 19:3; ಆದಿ 19:28:
  22. Footnote ಪ್ರಕ 18:15, 17:
  23. Footnote ಯೆರೆ 50. 46:
  24. Footnote ಪ್ರಕ 14:8:
  25. Footnote ಪ್ರಕ 18:17, 19; ವ. 8:
  26. Footnote ಪ್ರಕ 18:3, 15; ಯೆಹೆ. 27:36:
  27. Footnote ಪ್ರಕ 18:3, 11:
  28. Footnote ವ. 10:
  29. Footnote ಪ್ರಕ 17:4:
  30. Footnote ಪ್ರಕ 18:10, 19:
  31. Footnote ಯೆಹೆ. 27:28, 29:
  32. Footnote ವ. 9:
  33. Footnote ಯೆಹೆ. 27:30, 32; ಪ್ರಕ 13:4:
  34. Footnote ಯೆಹೋ. 7:6; ಯೋಬ. 2:12:
  35. Footnote ಪ್ರಕ 18:3, 15:
  36. Footnote ಪ್ರಕ 18:10, 17:
  37. Footnote ಧರ್ಮೋ 32:43; ಯೆರೆ 51:48; ಪ್ರಕ 12:12:
  38. Footnote ಲೂಕ 11:49, 50.
  39. Footnote ಪ್ರಕ 19:2:
  40. Footnote ಪ್ರಕ 5:2; 10:1:
  41. Footnote ಯೆರೆ 51:63, 64:
  42. Footnote ವ. 10:
  43. Footnote ಯೆಶಾ 14:11; 24:8; ಯೆಹೆ. 26:13:
  44. Footnote ಪ್ರಸಂಗಿ. 12:4; ಯೆರೆ 25:10:
  45. Footnote ಯೆರೆ 7:34; 16:9; 33:11:
  46. Footnote ಯೆಶಾ 23:8:
  47. Footnote ನಹೂ. 3:4:
  48. Footnote ಪ್ರಕ 17:6; ಮತ್ತಾ 23:35, 36:
  49. Footnote ಮೂಲ: ಅವಳಲ್ಲಿ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.