ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಪ್ರಕ 2
ಎಫೆಸ ಸಭೆಗೆ ಸಂದೇಶ
“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, 1ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು 2ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ, 3
“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ 4ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು 5ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ. ನೀನು ತಾಳ್ಮೆಯುಳ್ಳವನಾಗಿ 6ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು. ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. 7ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ 8ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ 9ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು. ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ 10ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು 11ಕಿವಿಯುಳ್ಳವನು ಕೇಳಲಿ. 12ಯಾವನು ಜಯಹೊಂದುತ್ತಾನೋ ಅವನಿಗೆ 13ದೇವರ ಪರದೈಸಿನಲ್ಲಿರುವ 14ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.
ಸ್ಮುರ್ನದ ಸಭೆಗೆ ಸಂದೇಶ
“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, 15ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ 16ಹೇಳುವುದೇನಂದರೆ, ನಾನು ನಿನ್ನ ಸಂಕಟವನ್ನೂ 17ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ 18ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ 19ಸಭಾಮಂದಿರದವರಾಗಿದ್ದಾರೆ. ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, 20ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು 21ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. 22ನೀನು ಸಾಯುವ ತನಕ 23ನಂಬಿಗಸ್ತನಾಗಿರು, ನಾನು ನಿನಗೆ 24ಜೀವದ ಕಿರೀಟವನ್ನು ಕೊಡುವೆನು. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು 25ಕಿವಿಯುಳ್ಳವನು ಕೇಳಲಿ. 26ಜಯಹೊಂದುವವನಿಗೆ 27ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
ಪೆರ್ಗಮದ ಸಭೆಗೆ ಸಂದೇಶ
“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, 28ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ, ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. 29ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ. ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. 30ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ 31ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು 32ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ. ಹಾಗೆಯೇ, 33ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ. ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆ 34ನಾನು ಬೇಗನೆ ನಿನ್ನ ಬಳಿಗೆ ಬಂದು 35ನನ್ನ ಬಾಯಿಂದ ಹೊರಬರುವ ಕತ್ತಿಯಿಂದ 36ಅವರ ಮೇಲೆ ಯುದ್ಧ ಮಾಡುವೆನು. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. 37ಯಾವನು ಜಯಹೊಂದುತ್ತಾನೋ ಅವನಿಗೆ 38ಬಚ್ಚಿಟ್ಟಿರುವ 39ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ 40ಹೊಸ ಹೆಸರನ್ನೂ ಕೊಡುವೆನು. 41ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.
ಥುವತೈರದ ಸಭೆಗೆ ಸಂದೇಶ
“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, 42ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ, 43ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು. ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. 44ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, 45ಜಾರತ್ವಮಾಡಬಹುದೆಂದೂ 46ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ. ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, 47ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ. ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು. 48ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ 49ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. 50ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
“ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು 51ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ. ಆದರೆ 52ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ. 53ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು 54ಕಡೆಯವರೆಗೂ ನಡಿಸುತ್ತಾನೋ, 55ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. 56‘ಅವನು 57ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, 58ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ 59ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು. 60ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
Source notes (60)
- Footnote ಪ್ರಕ 1:11, 13, 16, 20:
- Footnote ಪ್ರಕ 1:11, 13, 16, 20:
- Footnote ವ. 19:
- Footnote 2 ಕೊರಿ 11:13:
- Footnote 1 ಯೋಹಾ 4:1:
- Footnote ಯೋಹಾ 15:21:
- Footnote ಯೆರೆ 2:2:
- Footnote ವ. 2:
- Footnote ಪ್ರಕ 3:3, 19:
- Footnote ವ. 15:
- Footnote ಮತ್ತಾ 11:15; 13:9 ಇತ್ಯಾದಿ. ಪ್ರಕ 2:11, 17, 29; 3:6, 13, 22; 13:9:
- Footnote ಪ್ರಕ 3:5 ಇತ್ಯಾದಿ 21:7:
- Footnote ಯೆಹೆ. 28:13; 31:8. (ಗ್ರೀಕ್ ಮೂಲ); ಲೂಕ 23:43:
- Footnote ಅಂದರೆ, ಆನಂದವನ್ನು. ಆದಿ 2:8, 9; ಪ್ರಕ 22:2:
- Footnote ಪ್ರಕ 1:18:
- Footnote ಯೆಶಾ 44:6; ಪ್ರಕ 1:17, 18:
- Footnote ಯಾಕೋಬ. 2:5; 1 ತಿಮೊ. 6:18; ಇಬ್ರಿ. 10:34; 11:26:
- Footnote ಪ್ರಕ 3:9, 10:
- Footnote ಸೈತಾನನ ಸಭಾ ಮಂದಿರದವರಾಗಿದ್ದಾರೆ.
- Footnote ಪ್ರಕ 3:9, 10:
- Footnote ಆದಿ 24:55; ದಾನಿ. 1:12, 14:
- Footnote ಇಬ್ರಿ. 12:11:
- Footnote ಮತ್ತಾ 10:22; 24:13; ಮಾರ್ಕ 13:13; ಯಾಕೋಬ. 5:11:
- Footnote ಯಾಕೋಬ. 1:12:
- Footnote ವ. 7:
- Footnote ವ. 7:
- Footnote ಪ್ರಕ 20, 6, 14; 21:8:
- Footnote ಪ್ರಕ 1:16; 2:16:
- Footnote ವ. 9:
- Footnote ವ. 20:
- Footnote ಅರಣ್ಯ 25:1, 2; 31:16; 1 ಕೊರಿ 10:8:
- Footnote 2 ಪೇತ್ರ. 2:15:
- Footnote ವ. 6:
- Footnote ಪ್ರಕ 22:7:
- Footnote ವ. 12; ಪ್ರಕ 1:16:
- Footnote 2 ಥೆಸ. 2:8:
- Footnote ವ. 7:
- Footnote ಯೋಹಾ 6:48:
- Footnote ವಿಮೋ 16:33:
- Footnote ಯೆಶಾ 62:2; 65:15; ಪ್ರಕ 3:12:
- Footnote ಪ್ರಕ 14:3; 19:12:
- Footnote ಪ್ರಕ 1:14, 15:
- Footnote ವ. 2:
- Footnote ಕೆಲವು ಪ್ರತಿಗಳಲ್ಲಿ, ನಿನ್ನ ಹೆಂಡತಿಯು ಎಂದು ಬರೆದದೆ. 1 ಅರಸು. 16:31; 21:25:
- Footnote ಅರಣ್ಯ 25:1, 2; 1 ಕೊರಿ 10:8:
- Footnote ವ. 14:
- Footnote ಪ್ರಕ 9:20, 21; 16:9, 11:
- Footnote ಅಥವಾ, ಅವಳನ್ನು ಹಿಂಬಾಲಿಸಿದವರನ್ನು.
- Footnote ಕೀರ್ತ 7:9; 26:2; ಯೆರೆ 20:12; ರೋಮಾ. 8:27:
- Footnote ಮತ್ತಾ 16:27; 1 ಕೊರಿ 5:10. ಇಬ್ರಿ. 9:27; 1 ಪೇತ್ರ. 1:7:
- Footnote ಅ. ಕೃ. 15:28:
- Footnote ಪ್ರಕ 3:11:
- Footnote ವ. 7:
- Footnote ಇಬ್ರಿ. 3:6:
- Footnote ಕೀರ್ತ 2:8; ಪ್ರಕ 3:21; 20:4:
- Footnote ಕೀರ್ತ 2:9:
- Footnote ಪ್ರಕ 12:5; 19:15:
- Footnote ಯೆಶಾ 30. 14; ಯೆರೆ 19:11:
- Footnote 2 ಪೇತ್ರ. 1:19; ಪ್ರಕ 22:16:
- Footnote ವ. 7:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.