ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಪ್ರಕ 20
ಸಾವಿರ ವರ್ಷಗಳು
ಆಗ ಒಬ್ಬ ದೇವದೂತನು 1ಅಧೋಲೋಕದ 2ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಪಿಶಾಚಿಯೂ ಸೈತಾನನೂ ಆಗಿರುವ 3ಪುರಾತನ ಸರ್ಪವೆಂಬ ಘಟಸರ್ಪವನ್ನು 4ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು. ಆ ಸಾವಿರ ವರ್ಷ ಮುಗಿಯುವ ತನಕ 5ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು 6ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ 7ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು. 8
ತರುವಾಯ ಸಿಂಹಾಸನಗಳನ್ನು ಕಂಡೆನು. 9ಅವುಗಳ ಮೇಲೆ ಕುಳಿತಿದ್ದವರಿಗೆ 10ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ 11ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ 12ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. 13ಅವರು ಪುನಃ ಜೀವಿತರಾಗಿ ಎದ್ದು 14ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು. ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು. 15ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. 16ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ 17ಯಾಜಕರಾಗಿ 18ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು. ಆ ಸಾವಿರ ವರ್ಷಗಳು ಮುಗಿದ ಮೇಲೆ 19ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, 20ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ 21ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು. ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ 22ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು. ಇದಲ್ಲದೆ 23ಅವರನ್ನು ಮೋಸಗೊಳಿಸಿದ ಪಿಶಾಚನು 24ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ 25ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.
ಕಡೇ ನ್ಯಾಯತೀರ್ಪನ್ನು ಕುರಿತದ್ದು
ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. 26ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ 27ಪುಸ್ತಕಗಳು ತೆರೆಯಲ್ಪಟ್ಟವು. 28ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, 29ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. 30ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆ ಮೇಲೆ ಮೃತ್ಯುವೂ ಪಾತಾಳವೂ 31ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. 32ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ 33ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
Source notes (33)
- Footnote ಪ್ರಕ 9:1:
- Footnote ಪ್ರಕ 1 18:
- Footnote ಪ್ರಕ 12:9:
- Footnote 2 ಪೇತ್ರ. 2:4; ಯೂದ 6:
- Footnote ಪ್ರಕ 20:8, 10
- Footnote ಪ್ರಕ 9:1:
- Footnote ದಾನಿ. 6:17; ಮತ್ತಾ 27:66:
- Footnote ದಾನಿ. 7:9; ಮತ್ತಾ 19:28; ಲೂಕ 22:30.
- Footnote ಪ್ರಕ 3:21:
- Footnote ದಾನಿ. 7:22; 1 ಕೊರಿ 6:2,3:
- Footnote ಪ್ರಕ 6:9:
- Footnote ಪ್ರಕ 13:12, 14-16:
- Footnote ಯೋಹಾ 14:19; 2 ತಿಮೊ. 2:11:
- Footnote ದಾನಿ. 7:18; ಮತ್ತಾ 20:21; 2 ತಿಮೊ. 2:12:
- Footnote ಪ್ರಕ 14:13; 19:9:
- Footnote ಮತ್ತಾ 10:28:
- Footnote ಯೆಶಾ 61:6:
- Footnote ವ. 4:
- Footnote ಪ್ರಕ 20:2, 3:
- Footnote ಯೆಹೆ. 38:2, 16; 39:1:
- Footnote ಪ್ರಕ 16:14:
- Footnote ಯೆಹೆ. 39:6:
- Footnote ಪ್ರಕ 20:3, 8:
- Footnote ಪ್ರಕ 19:2, 3:
- Footnote ಪ್ರಕ 16:13:
- Footnote ಕೀರ್ತ 102:26:
- Footnote ದಾನಿ. 7:10:
- Footnote ಲೂಕ 10:20; ಫಿಲಿ. 4:3:
- Footnote ರೋಮಾ. 14:10; 2 ಕೊರಿ 5:10:
- Footnote ಪ್ರಕ 6:8:
- Footnote ಲೂಕ 20:36; 1 ಕೊರಿ 15:26; ಪ್ರಕ 21:4:
- Footnote ವ. 6:
- Footnote ಮತ್ತಾ 13:42, 50.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.