Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಪ್ರಕ 21

ನೂತನ ಭೂಮ್ಯಾಕಾಶಗಳು

ತರುವಾಯ 1ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. 2ಮೊದಲಿನ ಆಕಾಶವೂ ಮೊದಲಿನ ಭೂಮಿಯೂ 3ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ. ಇದಲ್ಲದೆ ಪರಲೋಕದಿಂದ 4ಪರಿಶುದ್ಧ ಪಟ್ಟಣವಾದ 5ಹೊಸ ಯೆರೂಸಲೇಮ್ 6ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. 7ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ 8ದೇವರ ನಿವಾಸವು ಮನುಷ್ಯರೊಂದಿಗೆ ಇದೆ. 9ಆತನು ಅವರೊಡನೆ ವಾಸಮಾಡುವನು. 10ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. 11ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. 12ಇನ್ನು ಮರಣವಿರುವುದಿಲ್ಲ. 13ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.

ಆಗ 14ಸಿಂಹಾಸನದ ಮೇಲೆ ಕುಳಿತಿದ್ದಾತನು, 15“ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು 16ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ 17ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, 18“ಎಲ್ಲಾ ನೆರವೇರಿತು, 19ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. 20ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು. 21ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. 22ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು. 23ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು 24ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.

ಹೊಸ ಯೆರೂಸಲೇಮ್

25

ಕಡೇ ಏಳು ಉಪದ್ರವಗಳಿಂದ ತುಂಬಿದ 26ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ 27ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ, 28ದೇವರಾತ್ಮನಲ್ಲಿ ನನ್ನನ್ನು 29ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು. ಅದು ದೇವರ ತೇಜಸ್ಸಿನಿಂದ ಕೂಡಿತ್ತು. 30ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು. ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. 31ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು. ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. 32ಪಟ್ಟಣದ 33ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. 34ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ 35ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 362,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು. ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ವತ್ತು ನಾಲ್ಕು 37ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ. ಆ ಗೋಡೆಯು 38ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. ಪಟ್ಟಣದ ಗೋಡೆಯ ಅಸ್ತಿವಾರಗಳು 39ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ, ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ, ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. 40ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ. 41ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ 42ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು. 43ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. 44ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು. 45ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ 46ರಾತ್ರಿಯಂತೂ ಇಲ್ಲವೇ ಇಲ್ಲ. ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು. 47ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ 48ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.

Source notes (48)
  1. Footnote ಯೆಶಾ 65:17; 66:22; 2 ಪೇತ್ರ. 3:13:
  2. Footnote ಪ್ರಕ 20:11:
  3. Footnote ಅಥವಾ: ಕಳೆದು, ಮಾಯವಾಗು, ಇಲ್ಲದೆ.
  4. Footnote ಯೆಶಾ 52:1; ಪ್ರಕ 11:2; 22:19:
  5. Footnote ಗಲಾ. 4:26; ಇಬ್ರಿ. 12:22; ಪ್ರಕ 3:12:
  6. Footnote ಇಬ್ರಿ. 11:10
  7. Footnote ಯೆಶಾ 61:10; 62:4, 5; ಪ್ರಕ 19:7:
  8. Footnote ಯಾಜ 26:11, 12:
  9. Footnote ಯೋಹಾ 1:14:
  10. Footnote ಯೆಹೆ. 36:27:
  11. Footnote ಯೆಶಾ 25:8; ಪ್ರಕ 7:17:
  12. Footnote 1 ಕೊರಿ 15:26; ಪ್ರಕ 20:14:
  13. Footnote ಯೆಶಾ 35:10; 51:11; 65:19:
  14. Footnote ಪ್ರಕ 4:2, 9; 5:1; 20:11:
  15. Footnote 2 ಕೊರಿ 15:26; ಪ್ರಕ 20:14:
  16. Footnote ಅಥವಾ, ಆತನು
  17. Footnote 1 ತಿಮೊ. 1:15; ಪ್ರಕ 3:14; 19:11; 22:6:
  18. Footnote ಪ್ರಕ 10:6:
  19. Footnote ಪ್ರಕ 1:8; 22:13:
  20. Footnote ಯೆಶಾ 55:1; ಯೋಹಾ 4:10, 13, 14; 7:37; ಪ್ರಕ 22:17:
  21. Footnote ಪ್ರಕ 2:7:
  22. Footnote ವ. 3:
  23. Footnote 1 ಕೊರಿ 6:9, 10; ಗಲಾ. 5:19-21; ಎಫೆ 5:5; 1 ತಿಮೊ. 1:9:
  24. Footnote ಪ್ರಕ 19:20:
  25. Footnote ಪ್ರಕ 15:1:
  26. Footnote ಪ್ರಕ 17:1:
  27. Footnote ವ. 2:
  28. Footnote ಪ್ರಕ 17:3; ಯೆಹೆ. 43:5:
  29. Footnote ಕೀರ್ತ 87:1; ಯೆಹೆ. 40. 2:
  30. Footnote ಮತ್ತಾ 5:14; ಫಿಲಿ. 2:15
  31. Footnote ಯೆಹೆ. 8:31-34:
  32. Footnote ಇಬ್ರಿ. 11:10; 1 ಕೊರಿ 3:11:
  33. Footnote ಅಥವಾ, ಗೋಡೆಗೆ.
  34. Footnote ಮತ್ತಾ 16:18; ಎಫೆ 2:20:
  35. Footnote ಯೆಹೆ. 40 3, 5; ಪ್ರಕ 11:1:
  36. Footnote ಮೂಲ: ಹನ್ನೆರಡು ಸಾವಿರ ಸ್ತಾದ್ಯ. ಅಂದರೆ ಸುಮಾರು ಹದಿನೈದು ಮೈಲಿಗಳು.
  37. Footnote ಅಂದರೆ ಮನುಷ್ಯನ ಕೈಯಳತ್ತೆ.
  38. Footnote ಅಥವಾ: ಚಕಮಕಿ ಜಾತಿಕಲ್ಲು, ವಜ್ರದಿಂದ; ವ. 11:
  39. Footnote ಯೆಶಾ 54:11, 12
  40. Footnote ಯೋಹಾ 4:23:
  41. Footnote ಯೆಶಾ 60. 19, 20; ಪ್ರಕ 22:5; ವ. 25:
  42. Footnote ವ. 11:
  43. Footnote ಯೆಶಾ 60. 3; ಪ್ರಕ 22:2:
  44. Footnote ವ. 26; ಯೆಶಾ 60. 5, 16:
  45. Footnote ಯೆಶಾ 60. 11:
  46. Footnote ವ. 23:
  47. Footnote ಯೆಶಾ 35:8; 52:1; ಯೆಹೆ. 44:9; ಯೋವೇ. 3:17; ಜೆಕ. 14:21; ಪ್ರಕ 22:14, 15:
  48. Footnote ಪ್ರಕ 3:5:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.