Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಪ್ರಕ 3

ಸಾರ್ದಿಸಿನ ಸಭೆಗೆ ಸಂದೇಶ

“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, 1ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. 2ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು 3ಸತ್ತವನಾಗಿರುವೆ.

“ಎಚ್ಚರವಾಗು, ಸಾಯುವ ಹಾಗಿರುವ 4ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ. ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ 5ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ. ಆದರೂ 6ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು 7ಯೋಗ್ಯರಾಗಿರುವುದರಿಂದ 8ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು. 9ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. 10ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, 11ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು. 12ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

ಫಿಲದೆಲ್ಫಿಯ ಸಭೆಗೆ ಸಂದೇಶ

“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, 13ಪರಿಶುದ್ಧನೂ, 14ಸತ್ಯವಂತನೂ, 15ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, 16ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ 17ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು. ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು 18ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು 19ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು. ಸೈರಣೆಯಿಂದಿರಬೇಕೆಂಬ 20ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, 21ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ. ನಾನು 22ಬೇಗನೇ ಬರುತ್ತೇನೆ, 23ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು. 24ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ 25ಸ್ತಂಭವಾಗಿ ನಿಲ್ಲಿಸುವೆನು. 26ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ 27ನನ್ನ ದೇವರ ಹೆಸರನ್ನು, ನನ್ನ 28ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, 29ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು. 30ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

ಲವೊದಿಕೀಯ ಸಭೆಗೆ ಸಂದೇಶ

“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, 31ದೇವರ ಸೃಷ್ಟಿಗೆ ಮೂಲನೂ ಆಗಿರುವ 32‘ಆಮೆನ್’ ಎಂಬಾತನು 33ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು. ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು. ನೀನು ನಿನ್ನ ವಿಷಯದಲ್ಲಿ 34ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, 35ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ. ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, 36ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ 37ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ 38ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ. 39ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. 40ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ 41ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು. 42ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ 43ಜಯಶಾಲಿಯಾದವನಿಗೆ 44ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”

Source notes (44)
  1. Footnote ಪ್ರಕ 1:4; 16, 20:
  2. Footnote 1 ತಿಮೊ. 5:6:
  3. Footnote ಲೂಕ 15:24; ಎಫೆ 2:1; ಕೊಲೊ 2:13:
  4. Footnote ಉಳಿದ ದೇಹದ ಅಂಗಗಳನ್ನು
  5. Footnote ಪ್ರಕ 16:15; ಮತ್ತಾ 24:43; 1 ಥೆಸ. 5:2, 4; 2 ಪೇತ್ರ. 3:10; ಪ್ರಕ 2:5:
  6. Footnote ಯೂದ. 23:
  7. Footnote ಲೂಕ 20:35:
  8. Footnote ಪ್ರಕ 6:11; 7:9; ಪ್ರಸಂಗಿ. 9:8:
  9. Footnote ಪ್ರಕ 2:7:
  10. Footnote ಕೀರ್ತ 69:28; ವಿಮೋ 32:32; ಲೂಕ 10:20; ಫಿಲಿ. 4:3:
  11. Footnote ಮತ್ತಾ 10:32; ಲೂಕ 12:8:
  12. Footnote ಪ್ರಕ 2:7:
  13. Footnote ಪ್ರಕ 6:10:
  14. Footnote ಪ್ರಕ 3:14; 6:10; 19:11; 1 ಯೋಹಾ 5:20:
  15. Footnote ಯೆಶಾ 22:22:
  16. Footnote ಯೋಬ. 12:14; ಯೆಶಾ 22:22; ಮತ್ತಾ 16:19:
  17. Footnote ಅ. ಕೃ. 14:27; 1 ಕೊರಿ 16:9; 2 ಕೊರಿ 2:12; ಕೊಲೊ 4:3:
  18. Footnote ಪ್ರಕ 2:9:
  19. Footnote ಯೆಶಾ 45:14; 49:23; 60. 14:
  20. Footnote ಪ್ರಕ 1:9; 2 ಥೆಸ. 3:5; 2 ಪೇತ್ರ. 2:9:
  21. Footnote ಪ್ರಕ 6:10; 8:13; 11:10; 13:8, 14; 17:8:
  22. Footnote ಪ್ರಕ 22:7, 12, 20:
  23. Footnote ಪ್ರಕ 2:10:
  24. Footnote ಪ್ರಕ 2:7:
  25. Footnote 1 ಅರಸು. 7:21; 2 ಪೂರ್ವ 3:17; ಯೆರೆ 1:18; ಗಲಾ. 2:9:
  26. Footnote ಕೀರ್ತ 23:6; 27:4:
  27. Footnote ಪ್ರಕ 14:1; 22:4:
  28. Footnote ಪ್ರಕ 21:2,10; ಯೆಹೆ. 48:35; ಗಲಾ. 4:26; ಇಬ್ರಿ. 12:22:
  29. Footnote ಪ್ರಕ 2:17; ಯೆಶಾ 62:2:
  30. Footnote ಪ್ರಕ 2:7:
  31. Footnote ಕೊಲೊ 1:15, 18; ಪ್ರಕ 21:6; 22:13:
  32. Footnote ಅಥವಾ. ಸತ್ಯವಂತನು; ಯೆಶಾ 65:16:
  33. Footnote ಪ್ರಕ 1:5; 3:7; 19:11; 22:6:
  34. Footnote ಹೋಶೇ. 12:8; ಜೆಕ. 11:5; 1 ಕೊರಿ 4:8:
  35. Footnote ಯೋಹಾ 9:39-41; ಎಫೆ 1:18:
  36. Footnote ಪ್ರಕ 16:15:
  37. Footnote ಪ್ರಕ 3:4; 19:8:
  38. Footnote ಯೆಶಾ 55:1; ಮತ್ತಾ 13:44; 25:9. ಜ್ಞಾನೋ 8:19:
  39. Footnote ಇಬ್ರಿ. 12:6:
  40. Footnote ಲೂಕ 12:36:
  41. Footnote ಯೋಹಾ 14:23. ಲೂಕ 24:29, 30.
  42. Footnote ಪ್ರಕ 5:5; 6:2; 17:14; ಯೋಹಾ 16:33; ಇಬ್ರಿ. 1:3; 10:12:
  43. Footnote ಪ್ರಕ 2:7:
  44. Footnote ಪ್ರಕ 20:4; ಪ್ರಕ 2:26; ಮತ್ತಾ 19:28; ಯೋಹಾ 12:26; 2 ತಿಮೊ. 2:12:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.