ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಪ್ರಕ 4
ಸ್ವರ್ಗೀಯ ಆರಾಧನೆ
ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು 1ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, 2“ಇಲ್ಲಿಗೆ ಏರಿ ಬಾ, 3ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು. ಕೂಡಲೆ ನಾನು 4ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ 5ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. ಕುಳಿತಿದ್ದವನು ಕಣ್ಣಿಗೆ 6ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ 7ಕಾಮನಬಿಲ್ಲು ಇತ್ತು. ಇದಲ್ಲದೆ ಸಿಂಹಾಸನದ ಸುತ್ತಲೂ 8ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ 9ಶುಭ್ರವಸ್ತ್ರ ಧರಿಸಿಕೊಂಡಿದ್ದ 10ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. 11ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು. ಸಿಂಹಾಸನದಿಂದ 12ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ 13ದೇವರ ಏಳು ಆತ್ಮಗಳನ್ನು ಸೂಚಿಸುವ 14ಏಳು ದೀಪಗಳು ಉರಿಯುತ್ತಿದ್ದವು. ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ 15ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ 16ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು. ಆ ನಾಲ್ಕು ಜೀವಿಗಳಿಗೆ 17ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. 18ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, 19
“ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, 20
ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.
ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ 21ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ 22ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, 23 ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. 24ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.
Source notes (24)
- Footnote ಪ್ರಕ 1:10; ವಿಮೋ 19:19, 20:
- Footnote ಪ್ರಕ 11:12:
- Footnote ಪ್ರಕ 1:1, 19; 22:6:
- Footnote ಪ್ರಕ 1:10:
- Footnote ಕೀರ್ತ 11:14, 103, 19; ಯೆಶಾ 66:1; ಮತ್ತಾ 5:34; 23:22:
- Footnote ಅಥವಾ, ವಜ್ರ. ಪ್ರಕ 21:11:
- Footnote ಯೆಹೆ. 1:27, 28; ಪ್ರಕ 10:1; ಆದಿ 9:13-17.
- Footnote ಪ್ರಕ 11:16:
- Footnote ಪ್ರಕ 3:4:
- Footnote 1ಪೂರ್ವ 24:1-18; ಪ್ರಕ 5:8:
- Footnote ವ. 10; ಯಾಕೋಬ. 1:12:
- Footnote ಪ್ರಕ 8:5,11,19; 16:18. ವಿಮೋ 19:16:
- Footnote ಪ್ರಕ 1:4:
- Footnote ಜೆಕ. 4:2:
- Footnote ಪ್ರಕ 15:2; 1 ಅರಸು. 7:23, 39:
- Footnote ಯೆಹೆ. 1:5-14,18; 10:12:
- Footnote ಯೆಶಾ 6:2:
- Footnote ವ. 6:
- Footnote ಯೆಶಾ 6:3:
- Footnote ಪ್ರಕ 1:4:
- Footnote ಪ್ರಕ 5:8, 14; 7:11; 11:16; 19:4:
- Footnote ಪ್ರಕ 5:12:
- Footnote ಪ್ರಕ 10:6; 14:7; ಆದಿ 1:1; ಅ. ಕೃ. 14:15; ಎಫೆ 3:9:
- Footnote ಕೀರ್ತ 33:9-11:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.