Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಪ್ರಕ 5

ಸುರುಳಿಯೂ ಕುರಿಮರಿಯೂ

ನಾನು1 ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು 2ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. 3ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. ಇದಲ್ಲದೆ 4ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು. ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ. ಸುರುಳಿಯನ್ನು ತೆರೆಯುವುದಕ್ಕಾಗಲಿ ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ. ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, 5ಯೂದ ಕುಲದಲ್ಲಿ ಜನಿಸಿದ 6ಸಿಂಹವೂ 7ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.

ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ 8ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ 9ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ. ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು. ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ 10ಬಿದ್ದರು. ಹಿರಿಯರ ಕೈಗಳಲ್ಲಿ 11ವೀಣೆಗಳೂ 12ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ 13ಚಿನ್ನದ ಧೂಪಾರತಿಗಳೂ ಇದ್ದವು. ಅವರು 14ಹೊಸಹಾಡನ್ನು ಹಾಡುತ್ತಾ,

“ನೀನು ಸುರುಳಿಯನ್ನು ಸ್ವೀಕರಿಸಲು

ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ.

ನೀನು ವಧಿಸಲ್ಪಟ್ಟು, 15ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ 16

ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು 17ದೇವರಿಗಾಗಿ ಕೊಂಡುಕೊಂಡಿರುವೆ.

ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, 18ಯಾಜಕರನ್ನಾಗಿಯೂ ಮಾಡಿರುವೆ.

ಅವರು ಭೂಮಿಯನ್ನು ಆಳುವರು.”

ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. 19ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. ಅವರು

“ವಧಿಸಲ್ಪಟ್ಟ ಕುರಿಮರಿಯು 20

ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ,

ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು”

ಎಂದು ಮಹಾಧ್ವನಿಯಿಂದ ಹಾಡಿದರು.

ಇದಲ್ಲದೆ 21ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ,

“ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ

ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು

ಯುಗಯುಗಾಂತರಗಳಲ್ಲಿಯೂ ಇರಲಿ”

ಎಂದು ಹೇಳುವುದನ್ನು ಕೇಳಿದೆನು. ಆಗ ನಾಲ್ಕು ಜೀವಿಗಳು 22“ಆಮೆನ್” ಅಂದವು ಮತ್ತು 23ಹಿರಿಯರು ಅಡ್ಡಬಿದ್ದು ಆರಾಧಿಸಿದರು.

Source notes (23)
  1. Footnote ಯೆಹೆ. 2:9, 10:
  2. Footnote ಪುಸ್ತಕ
  3. Footnote ಯೆಶಾ 29:11; ದಾನಿ. 12:4:
  4. Footnote ಪ್ರಕ 10:1; 18:21:
  5. Footnote ಇಬ್ರಿ. 7:14:
  6. Footnote ಅಥವಾ, ಸಿಂಹಪ್ರಾಯನೂ; ಆದಿ 49:9:
  7. Footnote ಯೆಶಾ 11:1, 10; ರೋಮಾ. 15:12; ಪ್ರಕ 22:16:
  8. Footnote ಎಲ್ಲಾ ಸ್ಥಳಗಳಲ್ಲಿಯೂ ಹಾಗೆಯೇ; ಯೆಶಾ 53:7; ಯೋಹಾ 1:29, 36; 1 ಪೇತ್ರ. 1:19. ಪ್ರಕ 5:9, 12; 13:8:
  9. Footnote ಜೆಕ. 3:9; 4:10:
  10. Footnote ಪ್ರಕ 4:10:
  11. Footnote ಪ್ರಕ 14:2; 15:2:
  12. Footnote ಕೀರ್ತ 141:2; ಪ್ರಕ 8:3, 4:
  13. Footnote ಪ್ರಕ 15:7:
  14. Footnote ಕೀರ್ತ 40. 3; 96:1; ಯೆಶಾ 42:10; ಪ್ರಕ 14:3:
  15. Footnote ವ. 6:
  16. Footnote ಪ್ರಕ 7:9; 11:9; 14:6; ದಾನಿ. 3:4:
  17. Footnote ಪ್ರಕ 14:3, 4; 2 ಪೇತ್ರ. 2:1:
  18. Footnote ವಿಮೋ 19:6; ಪ್ರಕ 1:6:
  19. Footnote ದಾನಿ. 7:19; ಇಬ್ರಿ. 12:22:
  20. Footnote ಪ್ರಕ 4:11:
  21. Footnote ಕೀರ್ತ 145:21; 150. 6:
  22. Footnote ಪ್ರಕ 7:12; 19:4:
  23. Footnote ವ. 8; ಪ್ರಕ 4:10:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.