ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಪ್ರಕ 7
ಒಂದು ಲಕ್ಷದ ನಲ್ವತ್ತನಾಲ್ಕು ಸಾವಿರ ಇಸ್ರಾಯೇಲ್ಯರಿಗೆ ಮುದ್ರೆಯೊತ್ತಿದ್ದು
ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು. ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು 1ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ, “ನಾವು ನಮ್ಮ ದೇವರ ದಾಸರಿಗೆ 2ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು 3ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ. ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ, ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ, ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ, ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.
ಸಕಲ ಜನಾಂಗಗಳ ಮಹಾ ಜನಸಮೂಹ
ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ 4ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. 5ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು 6ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ 7ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ 8ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು. ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು 9ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ 10ಅಡ್ಡಬಿದ್ದು, 11“ಆಮೆನ್! 12ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, 13“ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು. ಅವನು ನನಗೆ, “ಇವರು 14ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ 15ರಕ್ತದಲ್ಲಿ 16ತಮ್ಮ ನಿಲುವಂಗಿಗಳನ್ನು ತೊಳೆದು 17ಶುಭ್ರಮಾಡಿಕೊಂಡಿದ್ದಾರೆ. ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ 18ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ 19ಬಿಡಾರವಾಗಿರುವನು. ಇನ್ನೆಂದಿಗೂ 20ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, 21ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ. ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು 22ಅವರಿಗೆ ಕುರುಬನಂತಿದ್ದು 23ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. 24ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
Source notes (24)
- Footnote ಪೂರ್ವದಿಕ್ಕಿನಿಂದ
- Footnote ಯೆಹೆ. 9:4; ಪ್ರಕ 14:1; 22:4; ಪ್ರಕ 13 16:
- Footnote ಪ್ರಕ 9:16:
- Footnote ರೋಮಾ. 11:25:
- Footnote ಪ್ರಕ 5:9:
- Footnote ವ. 14. ಪ್ರಕ 3:4:
- Footnote ಯಾಜ 23:40; ಯೋಹಾ 12:13:
- Footnote ಅಥವಾ. ಯಜ್ಞದ ಕುರಿಯಾದಾತನಿಗೂ ಜಯವಾಗಲಿ; ಕೀರ್ತ 3:8; ಪ್ರಕ 12:10; 19:1:
- Footnote ಪ್ರಕ 4:6:
- Footnote ಪ್ರಕ 4:10:
- Footnote ಅಂದರೆ, ತಥಾಸ್ತು, ಹಾಗೆಯೇ ಆಗಲಿ; ಪ್ರಕ 5:14; 19:4:
- Footnote 1ಪೂರ್ವ 29:10, 11:
- Footnote ವ. 14; ಪ್ರಕ 3:4:
- Footnote ಮತ್ತಾ 24:21, 29; ದಾನಿ. 12:1:
- Footnote ಪ್ರಕ 1:5
- Footnote ಪ್ರಕ 22:14; ಯೆಶಾ 1:18; ಜೆಕ. 3:3-5:
- Footnote ದಾನಿ. 12:10; ಅ. ಕೃ. 15:9; 1 ಯೋಹಾ 1:7:
- Footnote ಪ್ರಕ 22:3:
- Footnote ಪ್ರಕ 21:3; ಯೆಶಾ 4, 5, 6; ಯೆಹೆ. 37:27; ಯೋಹಾ 1:14:
- Footnote ಯೆಶಾ 49:10:
- Footnote ಕೀರ್ತ 121:6:
- Footnote ಕೀರ್ತ 23:1, 2; ಯೆಶಾ 40. 11; ಯೆಹೆ. 34:12, 23; 37:24; ಜೆಕ. 13:7; ಮತ್ತಾ 2:6; ಯೋಹಾ 10:11; ಇಬ್ರಿ. 13:20; 1 ಪೇತ್ರ. 2:25; 5:4:
- Footnote ಪ್ರಕ 22:1; ಕೀರ್ತ 36:8, 9; ಯೋಹಾ 4:14:
- Footnote ಪ್ರಕ 21:4; ಯೆಶಾ 25:8:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.