Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಪ್ರಕ 9

ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ 1ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ 2ಅಧೋಲೋಕಕ್ಕೆ ಹೋಗುವ 3ಕೂಪದ 4ಬೀಗದ ಕೈ ಕೊಡಲ್ಪಟ್ಟಿತು. ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ 5ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು. ಹೊಗೆಯೊಳಗಿಂದ 6ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು. 7ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, 8ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು. ಅವರನ್ನು ಕೊಲ್ಲದೆ 9ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು. ಆ ಕಾಲದಲ್ಲಿ 10ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, 11ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. 12

ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. 13ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, 14ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು. ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ 15ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು. ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. 16ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು. ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು 17ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು. ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ 18ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ 19ಅಪೊಲ್ಲುವೋನನೆಂತಲೂ ಹೆಸರುಂಟು. 20

ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು.

ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ 21ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು. ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, 22“ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ 23ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು. ಆಗ 24ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು. ಕುದುರೆ ದಂಡಿನವರ ಸಂಖ್ಯೆಯು 25ಇಪ್ಪತ್ತು ಕೋಟಿ ಎಂದು 26ನನಗೆ ಕೇಳಿಸಿತು. ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು 27ಸಿಂಹಗಳ ತಲೆಗಳಂತಿದ್ದವು. ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ 28ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು. ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು. ಉಪದ್ರವಗಳಿಂದ ಸಾಯದೆ ಉಳಿದ ಜನರು 29ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು 30ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ31 ಪೂಜೆಯನ್ನೂ 32ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ. ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, 33ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.

Source notes (33)
  1. Footnote ಅಥವಾ, ನಕ್ಷತ್ರದವನೊಬ್ಬನನ್ನು; ಪ್ರಕ 8:10; ಯೆಶಾ 14:12; ಲೂಕ 10:18; ಪ್ರಕ 12:9:
  2. Footnote ಪ್ರಕ 9:2, 11; 11:7; 17:8; 20:1, 3. ಅಧೋಲೋಕವೆಂಬ ಅಭಿಪ್ರಾಯವುಳ್ಳ ಮೂಲದಲ್ಲಿನ ಪದವು ಲೂಕ 8:31; ರೋಮಾ. 10:7 ಈ ವಚನಗಳಲ್ಲಿಯೂ ಉಪಯೋಗಿಸಲ್ಪಟ್ಟಿದೆ.
  3. Footnote ಅಗಾಧ ಸ್ಥಳ, ಅಂಧಕಾರದ ಸ್ಥಳ.
  4. Footnote ಪ್ರಕ 1:18:
  5. Footnote ಯೆಶಾ 34:10:
  6. Footnote ವಿಮೋ 10:4, 5, 12, 15; ಯೋವೇ. 2:2:
  7. Footnote ಪ್ರಕ 8:7:
  8. Footnote ಪ್ರಕ 7:2, 3; ಯೆಹೆ. 9:4:
  9. Footnote ವ. 10:
  10. Footnote ಯೋಬ. 3:21; 7:15, 16; ಯೆರೆ 8:3:
  11. Footnote ಪ್ರಕ 6:16:
  12. Footnote ಯೋವೇ. 2:4-7:
  13. Footnote ನಹೂ. 3:17:
  14. Footnote ದಾನಿ. 7:8:
  15. Footnote ಯೋವೇ. 1:6:
  16. Footnote ಯೋವೇ. 2:5:
  17. Footnote ವ. 5:
  18. Footnote ಯೋಬ. 26:6:
  19. Footnote ಅಂದರೆ, ನಾಶ ಮಾಡುವವನು, ಸಂಹಾರಕನು.
  20. Footnote ಪ್ರಕ 8:13; 11:14:
  21. Footnote ವಿಮೋ 30:3. ಪಾಠಾಂತರ: ನಾಲ್ಕು ಕೊಂಬುಗಳಿಂದ.
  22. Footnote ಪ್ರಕ 16:12:
  23. Footnote ಪ್ರಕ 7:1:
  24. Footnote ಪ್ರಕ 8:7:
  25. Footnote ಕೀರ್ತ 68:17; ದಾನಿ. 7:10:
  26. Footnote ಪ್ರಕ 7:4:
  27. Footnote 1ಪೂರ್ವ 12:8; ಯೆಶಾ 5:28, 29:
  28. Footnote ಪ್ರಕ 8:7:
  29. Footnote ಧರ್ಮೋ 31:29; ಯೆರೆ 1:16; 25:14:
  30. Footnote ಪ್ರಕ 2:21:
  31. Footnote 1 ಕೊರಿ 10:20:
  32. Footnote ಕೀರ್ತ 115:4-7; 135:15-17; ದಾನಿ. 5:4, 23:
  33. Footnote ಪ್ರಕ 21:8; 22:15; ಗಲಾ. 5:20:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.