ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ರೋಮಾ 12
ದೇವಜನರು ನಡೆದುಕೊಳ್ಳಬೇಕಾದ ರೀತಿ
ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, 1ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ 2ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು. 3ಇಹಲೋಕದ ನಡವಳಿಕೆಯನ್ನು ಅನುಸರಿಸದೆ 4ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ 5ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ 6ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ 7ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು. ಯಾಕೆಂದರೆ 8ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ 9ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ. 10ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. 11ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ. 12ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ. ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. 13ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. 14ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ. 15
ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. 16ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ. 17ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. 18ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ. ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ 19ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ. 20ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ. ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ. 21ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ. 22ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ. 23ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ 24ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. 25ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. 26
ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. 27ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ. ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ 28ಎಲ್ಲರ ಸಂಗಡ ಸಮಾಧಾನದಿಂದಿರಿ. ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ 29“‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ. ಹಾಗಾದರೆ 30“ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”31. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.
Source notes (31)
- Footnote ರೋಮಾ. 6:13,16,19; 1 ಕೊರಿ 6:20
- Footnote ಪವಿತ್ರವಾಗಿಯೂ
- Footnote 1 ಪೇತ್ರ 1:14; 1 ಯೋಹಾ 2:15
- Footnote ತೀತ 3:5; ಎಫೆ 4:23; ಕೊಲೊ 3:10
- Footnote 1 ಥೆಸ. 4:3
- Footnote ರೋಮಾ. 11:20; 12:16
- Footnote 1 ಕೊರಿ 7:17; ಎಫೆ 4:7
- Footnote 1 ಕೊರಿ 12:12-14; ಎಫೆ 4:4,16
- Footnote 1 ಕೊರಿ 12:20 ಎಫೆ 4:4,12
- Footnote 1 ಕೊರಿ 12:4,7-11; 7:7; 1 ಪೇತ್ರ 4:10,11
- Footnote 1 ಕೊರಿ 12:10
- Footnote ಅ. ಕೃ. 6:1
- Footnote 2 ಕೊರಿ 8:2; 9:7,11,13
- Footnote 1 ತಿಮೊ. 5:17
- Footnote 2 ಕೊರಿ 6:6; 1 ತಿಮೊ. 1:5; 1 ಪೇತ್ರ 1:22
- Footnote ಕೀರ್ತ 97:10; ಅಮೋ. 5:15; 1 ಥೆಸ. 5:21,22
- Footnote ಇಬ್ರಿ. 13:1
- Footnote ರೋಮಾ. 13:7; ಫಿಲಿ. 2:3
- Footnote ಅ. ಕೃ. 18:25
- Footnote ರೋಮಾ. 5:2
- Footnote ಮತ್ತಾ 5:44; 1 ಪೇತ್ರ 3:9
- Footnote 1 ಕೊರಿ 12:26
- Footnote ರೋಮಾ. 15:5; 2 ಕೊರಿ 13:11; ಫಿಲಿ. 2:2; 4:2
- Footnote ರೋಮಾ. 12:3; ಕೀರ್ತ 131:1; ಯೆರೆ 45:5
- Footnote ರೋಮಾ. 11:25
- Footnote ಜ್ಞಾ. 20:22; ಮತ್ತಾ 5:39; 1 ಥೆಸ. 5:15
- Footnote 2 ಕೊರಿ 8:21
- Footnote ಮಾರ್ಕ 9:50
- Footnote ಧರ್ಮೋ 32:35; ಇಬ್ರಿ. 10:30
- Footnote ಜ್ಞಾ. 25:21,22; ಲೂಕ 6:27
- Footnote ತನ್ನ ತಪ್ಪಿನ ಅರಿವು ಅವನಿಗೆ ಆಗುವಂತೆ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.