Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ರೋಮಾ 13

ಅಧಿಕಾರಸ್ಥರಿಗೆ ಅಧೀನರಾಗಬೇಕೆಂದು ಬೋಧನೆ

1

ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ 2ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು. ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು. ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು. 3ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ. ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು. ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. 4ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.

ಧರ್ಮಶಾಸ್ತ್ರವೆಲ್ಲಾ ಪ್ರೀತಿಯಿಂದಲೇ ನೆರವೇರುವುದು ಎಂಬ ಬೋಧನೆ

ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. 5ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗೆಂದರೆ 6“ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು 7“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ. ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. 8ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ. 9

ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. 10ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ. ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ 11ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ. 12ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ 13ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ. 14ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ 15ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

Source notes (15)
  1. Footnote ತೀತ 3:1, 1 ಪೇತ್ರ. 2:13
  2. Footnote ಯೋಹಾ 19:11
  3. Footnote 2 ಪೂರ್ವ 19:6
  4. Footnote ಮತ್ತಾ, 17:25, ಮಾರ್ಕ 12:17
  5. Footnote ರೋಮಾ. 13:10, ಮತ್ತಾ 22:40, ಕೊಲೊ 3:14. ಯೋಹಾ 13:34
  6. Footnote ವಿಮೋ 20:13-17, ಮತ್ತಾ 19:18
  7. Footnote ಯಾಜ 19:18
  8. Footnote ರೋಮಾ. 13:18, ಯೋಹಾ 14:15
  9. Footnote 1 ಕೊರಿ 15:34. ಎಫೆ 5:14, 1 ಥೆಸ. 5:6
  10. Footnote ಯೆಶಾ 56:1, ಲೂಕ 21:28
  11. Footnote 2 ಕೊರಿ 6:7, ಎಫೆ 6:11-13, 1 ಥೆಸ. 5:8
  12. Footnote ಲೂಕ 21:34,
  13. Footnote ಯಾಕೋಬ. 3:14-16
  14. Footnote ಗಲಾ. 5:16
  15. Footnote ಗಲಾ. 21:34. ಕೊಲೊ 3:10

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.