Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ರೋಮಾ 6

ಸತ್ತು ಜೀವಿತನಾಗಿ ಎದ್ದ ಕ್ರಿಸ್ತನಲ್ಲಿ ಐಕ್ಯವಾದವರು

ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು. 1ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ? 2ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ 3ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ 4ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು 5ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ 6ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ 7ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು 8ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. 9ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ. ಇದಲ್ಲದೆ 10ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ 11ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. 12ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ, ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ 13ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.

ನಂಬಿದವರು ಪಾಪದ ದಾಸತ್ವದಿಂದ ಬಿಡುಗಡೆಯಾಗಿ ದೇವರಿಗೆ ದಾಸರಾಗುವರು

ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ 14ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ. ಯಾಕೆಂದರೆ 15ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು 16ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು 17ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ 18ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ, 19ಪಾಪದಿಂದ ಬಿಡುಗಡೆಯನ್ನು ಹೊಂದಿ 20ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ. ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು 21ಲೋಕದ ರೀತಿಯಾಗಿ ಮಾತನಾಡುತ್ತೇನೆ. 22ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ. ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ. ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ 23ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. 24ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ? ಈಗಲಾದರೋ ನೀವು 25ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ 26ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. ಯಾಕೆಂದರೆ 27ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

Source notes (27)
  1. Footnote ರೋಮಾ. 3:8; 6:11; 7:4,6; ಗಲಾ. 2:19; ಕೊಲೊ 2:20; 3:3; 1 ಪೇತ್ರ 2:24
  2. Footnote ಗಲಾ. 3:27
  3. Footnote ಕೊಲೊ 2:12
  4. Footnote ರೋಮಾ. 6:9; 8:11; ಅ. ಕೃ. 2:24
  5. Footnote 2 ಕೊರಿ 5:17; ಗಲಾ. 15; ಎಫೆ 4:23,24; ಕೊಲೊ 3:10
  6. Footnote ಫಿಲಿ. 3:10,11
  7. Footnote ಎಫೆ 4:22; ಕೊಲೊ 3:9
  8. Footnote ಗಲಾ. 2:20; 5:24; 6:14
  9. Footnote ರೋಮಾ. 6:18
  10. Footnote 2 ತಿಮೊ. 2:11; 2 ಕೊರಿ 4:10; 13:4
  11. Footnote ಅ. ಕೃ. 13:34; ಪ್ರಕ 1:18
  12. Footnote ಇಬ್ರಿ. 7:27
  13. Footnote ರೋಮಾ. 6:2
  14. Footnote ರೋಮಾ. 12:1
  15. Footnote ರೋಮಾ. 8:2; 12
  16. Footnote ನೇಮಗಳಿಗೆ
  17. Footnote ರೋಮಾ. 6:1
  18. Footnote ರೋಮಾ. 6:20
  19. Footnote ರೋಮಾ. 6:22; 8:2
  20. Footnote ರೋಮಾ. 6:22
  21. Footnote ರೋಮಾ. 3:5
  22. Footnote ರೋಮಾ. 6:13
  23. Footnote ರೋಮಾ. 7:5
  24. Footnote ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8
  25. Footnote ರೋಮಾ. 6:18
  26. Footnote 1 ಕೊರಿ 7:22; 1 ಪೇತ್ರ 2:16
  27. Footnote ರೋಮಾ. 5:12; 2:8

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.